ಕಾಂಗ್ರೆಸ್‌ ಸರ್ಕಾರ ಬೀಳಿಸೋಕೆ ಶಾಸಕರಿಗೆ ತಲಾ 50 ಕೋಟಿ ಆಮಿಷ – ಬಿಜೆಪಿ ವಿರುದ್ಧ ಡಿಕೆಶಿ ಗಂಭೀರ ಆರೋಪ

ಕಾಂಗ್ರೆಸ್‌ ಸರ್ಕಾರ ಬೀಳಿಸೋಕೆ ಶಾಸಕರಿಗೆ ತಲಾ 50 ಕೋಟಿ ಆಮಿಷ – ಬಿಜೆಪಿ ವಿರುದ್ಧ ಡಿಕೆಶಿ ಗಂಭೀರ ಆರೋಪ

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದೆ. ರಾಜಕೀಯ ನಾಯಕರ ಆರೋಪ – ಪ್ರತ್ಯಾರೋಪ ಜೋರಾಗಿಯೇ ಇದೆ. ಇದೀಗ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರ ಬೀಳಿಸೋಕೆ ಶಾಸಕರಿಗೆ ಬಿಜೆಪಿಯವರಿಂದ ತಲಾ 50 ಕೋಟಿ ಆಮಿಷವೊಡ್ಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣದ ಬಾಂಬರ್ ಯಾರೆಂಬುದು ಗೊತ್ತಾಗಿದೆ -ಗೃಹಸಚಿವ ಪರಮೇಶ್ವರ್

ಕೆಂಗೇರಿಯ ಸೂಲಿಕೇರಿ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಿಕೆಶಿ, ಮೈತ್ರಿ ಸರ್ಕಾರವನ್ನು ಕೆಡವಿದ ಬಿಜೆಪಿಯವರು, ಕಾಂಗ್ರೆಸ್‌ ಸರ್ಕಾರವನ್ನೂ ಬೀಳಿಸಲು ನಮ್ಮ  ಶಾಸಕರಿಗೆ ತಲಾ 50 ಕೋಟಿ ರು. ಹಣದ ಆಮಿಷ ನೀಡಲು ಪ್ರಯತ್ನಿಸಿದ್ದರು. ನಮ್ಮ ಶಾಸಕರಿಗೆ ತಲಾ 50 ಕೋಟಿ ಕೊಟ್ಟು ಸರ್ಕಾರ ಬೀಳಿಸಲು ಬಿಲ್ಲು ಬಾಣ ತೆಗೆದುಕೊಂಡಿದ್ದರು. ರಾಜ್ಯ ಸಭೆ ಚುನಾವಣೆಯಲ್ಲಿ ನಮ್ಮ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ಬಿಜೆಪಿಗರು ಸಂಪರ್ಕ ಮಾಡಿದ್ದರು. ಆದರೆ ಇದ್ಯಾವುದೂ ಸಾಧ್ಯವಾಗಲಿಲ್ಲ. ಇಂತಹ ನೀತಿಗೆಟ್ಟ ರಾಜಕಾರಣ ಕಂಡು ನನಗೆ ಅಸಹ್ಯವಾಗುತ್ತದೆ ಎಂದು ಡಿ.ಕೆಶಿ ಹೇಳಿದ್ದಾರೆ.

ನಾವು ಹಾಗೂ ಸಿದ್ದರಾಮಯ್ಯ ಅವರು ಕೋಮುವಾದಿ ಪಕ್ಷ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಐದು ವರ್ಷಗಳ ಕಾಲ ಬೇಷರತ್ತಾಗಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಮಾಡಿದ್ದೆವು. ಈ ಮೈತ್ರಿ ಸರ್ಕಾರವನ್ನು ಕೆಡವಿದ ಯಡಿಯೂರಪ್ಪ, ಯೋಗೇಶ್ವರ್, ಮುನಿರತ್ನ ಅವರನ್ನೇ ಇವತ್ತು ಕುಮಾರಸ್ವಾಮಿ ಅಪ್ಪಿಕೊಂಡು ಅವರ ವಕ್ತಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Shwetha M