ಸಿಎಂ ವಾರ್ನಿಂಗ್‌ಗೂ ಯತೀಂದ್ರ ಡೋಂಟ್‌ಕೇರ್!‌ – ಮತ್ತೆ ಡಿಕೆಶಿಗೆ ಪಂಚ್‌ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಸಿಎಂ ವಾರ್ನಿಂಗ್‌ಗೂ ಯತೀಂದ್ರ ಡೋಂಟ್‌ಕೇರ್!‌ – ಮತ್ತೆ ಡಿಕೆಶಿಗೆ ಪಂಚ್‌ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ರಾಜ್ಯ ರಾಜಕೀಯದಲ್ಲಿ ಮತ್ತೆ ಗದ್ದುಗೆ ಗುದ್ದಾಟ ಮುನ್ನಲೆಗೆ ಬಂದಿದೆ. ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಈ ವಿಚಾರದಲ್ಲಿ ಸೈಲೆಂಟ್‌ ಆಗಿದ್ರೂ ಬೇರೆ ನಾಯಕರು ಈ ಬಗ್ಗೆ ಚರ್ಚೆ ನಡೆಸುತ್ತಲೇ ಇದ್ದಾರೆ. ಇದೀಗ ಮತ್ತೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಇದು ಡಿಕೆ ಶಿವಕುಮಾರ್‌ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ: ಡೆವಿಲ್ ಗೆಲ್ಲಿಸಲು ವಿಜಿ ಥಿಯೇಟರ್ ರೌಂಡ್ಸ್ – ದರ್ಶನ್ ಸಿನಿಮಾ ಬ್ಲಾಕ್ ಬಸ್ಟರ್ ಎಂದ್ರು ಧನ್ವೀರ್, ದಿನಕರ್ ತೂಗುದೀಪ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹೆಚ್ಚಾಗುತ್ತಿದ್ದಂತೆ ಹೈಕಮಾಂಡ್‌ ಮಧ್ಯ ಪ್ರವೇಶ ಮಾಡಿತ್ತು. ಅದಾದ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಮಧ್ಯೆ ಎರಡು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆದಿತ್ತು. ಡಿಕೆಶಿ ಮನೆಗೆ ಆಗಮಿಸಿ ಪ್ರತಿಕ್ರಿಯಿಸಿದ್ದ ಸಿಎಂ ಹೈಕಮಾಂಡ್‌ ಹೇಳುವವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ತಿಳಿಸಿದ ನಂತರ ಈ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ ಪುತ್ರ ಮತ್ತೆ ತಂದೆಯ ಪರ ಬ್ಯಾಟ್‌ ಬೀಸಿದ್ದಾರೆ. ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಮತ್ತೆ ಬಾಂಬ್‌ ಸಿಡಿಸಿದ್ದಾರೆ.

ಇದೀಗ ಸಿಎಂ ಸಿದ್ದರಾಮಯ್ಯ ಪುತ್ರನ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಯತೀಂದ್ರ ಹೇಳಿಕೆಗೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ನೀಡೋದಾಗಿ ಡಿಕೆಶಿ ಹೇಳಿದ್ದಾರೆ.

ಇನ್ನು ಕಳೆದ ಎರಡು ದಿನಗಳ ಹಿಂದೆಯೂ ಸಿಎಂ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ಧರಾಮಯ್ಯ ಬಹಿರಂಗವಾಗಿ ಹೇಳಿಕೆ ನೀಡಿದ್ರು. ಈ ಬೆನ್ನಲ್ಲೇ  ಸಿದ್ಧರಾಮಯ್ಯ ಪುತ್ರನನ್ನ ಕರೆದು ವಾರ್ನಿಂಗ್‌ ಮಾಡಿದ್ರು. ಬೆಳಗಾವಿಯ ಸರ್ಕಿಟ್‌ ಹೌಸ್‌ಗೆ ಪುತ್ರನನ್ನು ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಸುಮಾರು 1 ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಏನಿದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತೆ, ನೀನು ಮಾತನಾಡುವುದು ಬೇಡ. ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ಇದೆ. ಯಾರೂ ಮಾತನಾಡುತ್ತಿಲ್ಲ ನೀನೊಬ್ಬನೇ ಮಾತನಾಡಿದರೆ ಬೇರೆ ಸಂದೇಶ ಹೋಗುತ್ತೆ. ಅಧಿವೇಶನ ಸಮಯದಲ್ಲಿ ಅನಗತ್ಯ ಗೊಂದಲ ಆಗುವುದು ಬೇಡ ಎಂದು ಸಿಎಂ ವಾರ್ನ್‌ ಮಾಡಿದ್ದಾರೆ. ಆದ್ರೀಗ ಮತ್ತೆ ಯತೀಂದ್ರ ಸಿದ್ಧರಾಮಯ್ಯ ನಾಯಕತ್ವ ಬದಲಾವಣೆ ವಿಚಾರದ ಹೇಳಿಕೆ ನೀಡಿರುವುದು ಉರಿಯೋ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.

Shwetha M