ಮುಖ್ಯಮಂತ್ರಿಯಾಗುವ ಬಗ್ಗೆ ಪರೋಕ್ಷವಾಗಿ ಮಾತಾಡಿದ ಡಿ.ಕೆ ಶಿವಕುಮಾರ್ –ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಡಿಕೆಶಿ

ಮುಖ್ಯಮಂತ್ರಿಯಾಗುವ ಬಗ್ಗೆ ಪರೋಕ್ಷವಾಗಿ ಮಾತಾಡಿದ ಡಿ.ಕೆ ಶಿವಕುಮಾರ್ –ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಡಿಕೆಶಿ

ಉಪ ಮುಖ್ಯಮಂತ್ರಿಯಾದರೂ ಮುಖ್ಯಮಂತ್ರಿಯಾಗುವ ಆಸೆಯಲ್ಲಿದ್ದಾರಾ ಡಿ.ಕೆ ಶಿವಕುಮಾರ್ ಅನ್ನೋ ಪ್ರಶ್ನೆ ಮೂಡಿದೆ. ಯಾಕೆಂದರೆ, ಪರೋಕ್ಷವಾಗಿಯೇ ತಾನು ಮುಂದೆ ಸಿಎಂ ಆಗುವುದು ಖಂಡಿತಾ ಅನ್ನೋ ರೀತಿ ಡಿ.ಕೆ ಶಿವಕುಮಾರ್ ಮಾತಾಡಿದ್ದಾರೆ. ಕನಕಪುರಕ್ಷೇತ್ರದ ಕಲ್ಲಹಳ್ಳಿ, ಶಿವನಹಳ್ಳಿ, ಹಾರೋಹಳ್ಳಿಯಲ್ಲಿ ಮತದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕೃತಜ್ಞತೆ ಸಲ್ಲಿಸಲು ಬಂದಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ, “ನನ್ನನ್ನು ಮುಖ್ಯಮಂತ್ರಿ ಮಾಡಲು ನೀವು ಬಹಳ ಆಸೆಯಿಂದ ಕೆಲಸ ಮಾಡಿದ್ದೀರಿ” ಸೂಕ್ತ ಸಮಯದಲ್ಲಿ ಎಐಸಿಸಿ ನಿರ್ಧಾರ ತೆಗೆದುಕೊಳ್ಳಲಿದೆ, ಒಳ್ಳೆ ದಿನಗಳು ಮುಂದೆ ಬರಲಿದೆ” ಎನ್ನುವ ಮೂಲಕ ಪರೋಕ್ಷವಾಗಿ ಮುಂದೆ ಸಿಎಂ ಆಗಲಿದ್ದೇನೆ ಎಂದರು.

ಇದನ್ನೂ ಓದಿರಿ: ʼದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ!ʼ – ಬಿಜೆಪಿಗೆ ಟಾಂಗ್‌ ಕೊಟ್ಟ ಕಾಂಗ್ರೆಸ್‌ 

ಡಿ.ಕೆ ಶಿವಕುಮಾರ್ ಸಿಎಂ ಸ್ಥಾನದ ಮೇಲಿನ ತಮ್ಮ ನಿರೀಕ್ಷೆಯನ್ನು ಬಹಿರಂಗವಾಗಿ ಹೇಳಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಸಿಗುವ ಅವಕಾಶದ ಬಗ್ಗೆ ಕ್ಷೇತ್ರದ ಮತದಾರರಿಗೆ ಹೇಳಿದ್ದಾರೆ. ಮತದಾರರ ಜೊತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಈ ಕ್ಷೇತ್ರದ ಜನ ಕೇವಲ ಡಿ.ಕೆ. ಶಿವಕುಮಾರ್ ಗೆ ಗೆಲುವು ಕೊಟ್ಟಿಲ್ಲ. ರಾಜ್ಯಕ್ಕೆ, ದೇಶಕ್ಕೆ ಹಾಗೂ ಎಲ್ಲ ಪಕ್ಷಗಳಿಗೆ ಒಂದು ಸಂದೇಶ ಕೊಟ್ಟಿದ್ದಾರೆ. ಹೀಗಾಗಿ ಕ್ಷೇತ್ರದ ಮಹಾಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಅಲ್ಲದೆ, “ನನ್ನನ್ನು ಮುಖ್ಯಮಂತ್ರಿ ಮಾಡಲು ನೀವು ಬಹಳ ಆಸೆಯಿಂದ ಕೆಲಸ ಮಾಡಿದ್ದಿರಿ. ನೀವು ಆತಂಕ, ನಿರಾಸೆಪಡುವ ಅಗತ್ಯವಿಲ್ಲ. ಸೂಕ್ತ ಕಾಲದಲ್ಲಿ ಎಐಸಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ನಾವು ಶಾಂತಿಯಿಂದ, ಶ್ರದ್ಧೆಯಿಂದ ಕೆಲಸ ಮಾಡಬೇಕಿದೆ” ಎಂದರು. ಈಗ ನಾನು, ಸಿದ್ದರಾಮಯ್ಯ, ಸಚಿವ ಸಂಪುಟ ಸಚಿವರೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ನಿಮಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕಿದೆ. ನಾನು ಸಿದ್ದರಾಮಯ್ಯನವರು ನಾಡ ದೇವತೆ ಚಾಮುಂಡೇಶ್ವರಿ ಸನ್ನಿದಿಯಲ್ಲಿ ಪ್ರಾರ್ಥನೆ ಮಾಡಿ, ನಾವು ಕೊಟ್ಟಿರುವ ಮಾತು ಉಳಿಸಿಕೊಳ್ಳುವ ಹಾಗೂ ಗ್ಯಾರಂಟಿ ಯೋಜನೆ ಜಾರಿ ಮಾಡಲು ಸಾಮರ್ಥ್ಯ ಕೊಡುವಂತೆ ಕೇಳಿಕೊಂಡಿದ್ದೆವು. ದೇಶ ಹಾಗೂ ರಾಜ್ಯದ ಇತಿಹಾಸದಲ್ಲಿ ಒಂದೇ ದಿನ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಬಿಜೆಪಿ ಹಾಗೂ ಜೆಡಿಎಸ್ ನವರ ದುಃಖ, ದುಗುಡ ಹೆಚ್ಚಾಗಿದ್ದು, ರಾಜ್ಯದ ಜನ ನೋಡುತ್ತಿದ್ದಾರೆ. ನೀವೆಲ್ಲರೂ ನಿಮ್ಮ ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ಈ ಯೋಜನೆ ಲಾಭ ಸಿಗುವಂತೆ ಮಾಡಬೇಕು ಎಂದರು.

suddiyaana