ಸಿಎಂ ಸಿದ್ದರಾಮಯ್ಯಗೆ ಹೆಚ್ಚು ಆರೋಗ್ಯ ಸಿಗಲಿ – ಜನರ ಸೇವೆ ಮಾಡುವ ಅವಕಾಶ ಭಗವಂತ ನೀಡಲಿ : ಡಿಕೆ ಶಿವಕುಮಾರ್

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, “ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿಕೆಶಿ ಹೇಳಿದರು. ಸದಾಶಿವ ನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಅವರು ಪ್ರತಿಕ್ರಿಯೆ ನೀಡಿದರು. ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ ಈ ಹೇಳಿಕೆಯಿಂದ ಮತ್ತೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, ‘ನೀವುಗಳು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮಲ್ಲಿ ಯಾರಿಗೂ ಗೊಂದಲವಿಲ್ಲ’ ಎಂದು ತಿಳಿಸಿದರು. ಸಿಎಂ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಕೇಳಿದಾಗ, ‘ಅವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದರು.
ಇದನ್ನೂ ಓದಿ: ಎರಡನೇ ಮದುವೆಗೆ ರೆಡಿಯಾದ ಗಬ್ಬರ್ – ಸೋಫಿ ಶೈನ್ ಜೊತೆ ಶಿಖರ್ ಧವನ್ ವಿವಾಹ
ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಹಣ ಮೂಲ ಕಾಂಗ್ರೆಸ್ ಪಕ್ಷದ್ದೋ, ಸರ್ಕಾರದಿಂದಲೋ? ಐಟಿ ಇಲಾಖೆ ಏನು ಮಾಡುತ್ತಿದೆ ಎನ್ನುವ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, ʼಐಟಿ ಸೇರಿದಂತೆ ಇತರೇ ಎಲ್ಲಾ ಇಲಾಖೆಗಳು ವಿರೋಧ ಪಕ್ಷಗಳ ಹತ್ತಿರವೇ ಇದೆಯಲ್ಲವೇ? ಕುಮಾರಸ್ವಾಮಿ ಜೇಬಲ್ಲೇ ಇದ್ದಾವಲ್ಲ? ಪರಿಹಾರ ಹಣದ ಬಗ್ಗೆ ಜಮೀರ್ ಅವರ ಬಳಿ ಮಾತನಾಡುತ್ತೇನೆʼ ಎಂದು ಉತ್ತರಿಸಿದರು. ಬಳ್ಳಾರಿ ಭೇಟಿಯ ಬಗ್ಗೆ ಕೇಳಿದಾಗ, ʼನಮಗೆ ಈ ರಾಜ್ಯದಲ್ಲಿರುವ ಹಾಗೂ ಬಳ್ಳಾರಿಯಲ್ಲಿ ಶಾಂತಿಯುತ ವಾತಾವರಣ ಉಳಿಯಬೇಕು. ಬಿಜೆಪಿಯವರು ಹತಾಶರಾಗಿ ಎಲ್ಲಾ ಕಡೆ ಇಂತಹ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲಿ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆʼ ಎಂದರು.

ನೋಡಿರಿ

