ಬ್ರಿಕ್ಸ್ ಶೃಂಗಸಭೆ ಬಳಿಕ ಡೊನಾಲ್ಡ್ ಟ್ರಂಪ್ ವಾರ್ನಿಂಗ್ – ಅಮೆರಿಕ ವಿರೋಧಿ ನೀತಿ ಬೆಂಬಲಿಸೋ ದೇಶಕ್ಕೆ ಸುಂಕದ ಬರೆ!

ಬ್ರೆಜಿಲ್ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬ್ರಿಕ್ಸ್ ದೇಶಗಳಿಗೆ ವಾರ್ನಿಂಗ್ ನೀಡಿದ್ದಾರೆ. ಬ್ರಿಕ್ಸ್ ದೇಶಗಳು ಅಮೆರಿಕ ವಿರೋಧಿ ನೀತಿಯನ್ನು ಬೆಂಬಲಿಸಿದರೆ, ಆ ದೇಶಗಳ ಮೇಲೆ ಹೆಚ್ಚುವರಿಯಾಗಿ ಶೇ.10ರಷ್ಟು ಸುಂಕವನ್ನು ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಬ್ರಿಕ್ಸ್‌ನ 11 ರಾಷ್ಟ್ರಗಳ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಾಗ್ದಾಳಿ ನಡೆಸಿದ್ದು, ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾಗಳನ್ನು ಒಳಗೊಂಡಿರುವ ಬ್ರಿಕ್ಸ್ ಬಣಕ್ಕೆ ಹೆಚ್ಚುವರಿಯಾಗಿ ಶೇಕಡಾ 10 ರಷ್ಟು ಸುಂಕ ವಿಧಿಸಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಟ್ರೂತ್ ನಲ್ಲಿ ಬರೆದಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬ್ರಿಕ್ಸ್‌ನ ಅಮೇರಿಕನ್ ವಿರೋಧಿ ನೀತಿಗಳೊಂದಿಗೆ ತಮ್ಮನ್ನು ತಾವು ಹೊಂದಿಸಿಕೊಳ್ಳುವ ಯಾವುದೇ ದೇಶಕ್ಕೆ ಹೆಚ್ಚುವರಿಯಾಗಿ ಶೇ.10 ಸುಂಕ ವಿಧಿಸಲಾಗುತ್ತದೆ. ಈ ನೀತಿಗೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಹೇಳಿದ್ದಾರೆ.
ಈ ಬಾರಿಯ ಬ್ರಿಕ್ಸ್ ಶೃಂಗಸಭೆಯನ್ನು ಬ್ರೆಜಿಲ್ ಆಯೋಜಿಸಿದ್ದು, ಇದರಲ್ಲಿ ಹಳೆಯ 5 ದೇಶಗಳಲ್ಲದೆ ಹೊಸ ಸದಸ್ಯ ರಾಷ್ಟ್ರಗಳಾದ ಈಜಿಪ್ಟ್, ಇಥಿಯೋಪಿಯಾ, ಇರಾನ್, ಯುಎಇ ಮತ್ತು ಇಂಡೋನೇಷ್ಯಾ ಭಾಗವಹಿಸಿದ್ದವು. 2009 ರಲ್ಲಿ ನಡೆದ ತನ್ನ ಮೊದಲ ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾದ ನಾಯಕರನ್ನು ಒಟ್ಟುಗೂಡಿಸಿತು. ಬಳಿಕ ಇದಕ್ಕೆ ದಕ್ಷಿಣ ಆಫ್ರಿಕಾ ಸೇರಿಕೊಂಡಿತು. ಕಳೆದ ವರ್ಷ ಈಜಿಪ್ಟ್, ಇಥಿಯೋಪಿಯಾ, ಇಂಡೋನೇಷ್ಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಇಂಡೋನೇಷ್ಯಾವನ್ನು ಸದಸ್ಯರನ್ನಾಗಿ ಸೇರಿಸಿತು.

ನೋಡಿರಿ

