ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆದರೆ ಕಠಿಣ ಕ್ರಮ – ಡಿ.ಕೆ ಶಿವಕುಮಾರ್‌

ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆದರೆ ಕಠಿಣ ಕ್ರಮ – ಡಿ.ಕೆ ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಲು ಜನರು ಉತ್ಸುಕರಾಗಿದ್ದು, ಅರ್ಜಿ ಸಲ್ಲಿಕೆಗಾಗಿ ನೋಂದಣಿ ಕೇಂದ್ರಗಳಿಗೆ ಮುಗಿಬೀಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಸೇವಾಸಿಂಧು, ಬೆಂಗಳೂರು ಒನ್ ಸೇರಿದಂತೆ ಹಲವು ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಕೇಳಿಬರುತ್ತಿವೆ. ಈ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಖಡಕ್‌ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆಗೆ ಉತ್ತಮ ರೆಸ್ಪಾನ್ಸ್‌ – ಐದು ದಿನದಲ್ಲಿ 20 ಲಕ್ಷಕ್ಕೂ ಹೆಚ್ಚು ಗ್ರಾಹಕರ ಅರ್ಜಿ ಸಲ್ಲಿಕೆ

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಜನರಲ್ಲಿ ನಾನು ಮಾಡುವ ಮನವಿ ಏನೆಂದರೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನ ಹಣ ನೀಡುವಂತಿಲ್ಲ. ಸೇವಾಸಿಂಧು ಸೇರಿ ಹಲವು ಕೇಂದ್ರಗಳಲ್ಲಿ ಹಣ ಪಡೆಯುವ ದೂರು ಬಂದಿದೆ. ಯಾರೂ ಕೂಡ ಸಾರ್ವಜನಿಕರಿಂದ ಹಣ ಪಡೆಯುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿ ಲೈಸೆನ್ಸ್ ರದ್ದುಗೊಳಿಸುತ್ತೇವೆ ಎಂದು ಖಡಕ್​ ವಾರ್ನಿಂಗ್‌ ಕೊಟ್ಟಿದ್ದಾರೆ.

suddiyaana