ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ – ರಾಜಕೀಯ ಗಣ್ಯರಿಂದ ಸಂತಾಪ
ಸಾಗರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ – ರಾಜಕೀಯ ಗಣ್ಯರಿಂದ ಸಂತಾಪಸಾಗರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. . ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತೀವ್ರ ನಷ್ಟಉಂಟಾಗಿದೆ. ಗಣ್ಯರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದು, ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗಿದೆ.

ಇದನ್ನೂ ಓದಿ : ಹುಷಾರ್.. ಜಗತ್ತನ್ನೇ ಆಳುತ್ತೆ ‘AI’- ಮನುಷ್ಯರ ಕೆಲಸಕ್ಕೆ ಕುತ್ತು ತರುತ್ತಾ?

ಡಾ. ನಾರ್ಬಟ್ ಡಿಸೋಜರವರು 1937 ಜೂನ್ 6ರಂದು ಜನಿಸಿದರು. ತಂದೆ ಎಫ್.ಪಿ.ಡಿಸೋಜ, ತಾಯಿ ರೂಪಿನಾ ಡಿಸೋಜ. ನಾ.ಡಿಸೋಜರವರು ಈವರೆಗೆ 37 ಕಾದಂಬರಿಗಳು, ನಾಲ್ಕು ನಾಟಕಗಳು, ಇಪ್ಪತ್ತೆಂಟು ಮಕ್ಕಳ ಕೃತಿಗಳು ಸೇರಿದಂತೆ ನೂರಾರು ಕತೆಗಳನ್ನು ಬರೆದಿದ್ದಾರೆ.

ಇವರ ಕಾದಂಬರಿ ‘ಕಾಡಿನ ಬೆಂಕಿ’ ಹಾಗೂ ‘ದ್ವೀಪ’ ಚಲನಚಿತ್ರಗಳಾಗಿ ‘ರಜತಕಮಲ’ ಹಾಗೂ ‘ಸ್ವರ್ಣಕಮಲ’ ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ‘ಬಳುವಳಿ’ ಕಾದಂಬರಿ ಕೊಂಕಣಿಯಲ್ಲಿ ಚಲನಚಿತ್ರವಾಗಿದೆ. ‘ಸಾರ್ಕ್’ ದೇಶಗಳ ಸಾಹಿತಿಗಳ ಸಮ್ಮೇಳನದಲ್ಲಿ ಸ್ವಂತ ಕಥಾವಾಚನ ಮಾಡಿದ್ದರು.

ಪ್ರಶಸ್ತಿಗಳು

ಇವರ ‘ಮುಳುಗಡೆಯ ಊರಿಗೆ ಬಂದವರು’ ಕಿರು ಕಾದಂಬರಿಗೆ 2011ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ದೊರೆತಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಂಗಳೂರು ಸಂದೇಶ ಪ್ರಶಸ್ತಿ, ನವದೆಹಲಿ ಕಥಾ ಪ್ರಶಸ್ತಿ, ಪುತ್ತೂರು ನಿರಂಜನ ಸಾಹಿತ್ಯ ಪ್ರಶಸ್ತಿ ಮುಂತಾದವುಗಳಿಂದ ಪುರಸ್ಕೃತರಾಗಿದ್ದಾರೆ. 2014ರ ಜನವರಿಯಲ್ಲಿ ಮಡಿಕೇರಿಯಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

 

Kishor KV

Leave a Reply

Your email address will not be published. Required fields are marked *