ಪುರಿ ಜಗನ್ನಾಥ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಹೊಸ ರೂಲ್ಸ್!‌ – ಇನ್ನು ಮುಂದೆ ಇಂತಹ ಬಟ್ಟೆ ಧರಿಸುವಂತಿಲ್ಲ!

ಪುರಿ ಜಗನ್ನಾಥ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಹೊಸ ರೂಲ್ಸ್!‌ – ಇನ್ನು ಮುಂದೆ ಇಂತಹ ಬಟ್ಟೆ ಧರಿಸುವಂತಿಲ್ಲ!

ಒಡಿಶಾದ ಪುರಿ ಜಗನ್ನಾಥ ದೇವಾಲಯದ ಹೋಗುವ ಭಕ್ತರಿಗೆ ಮಹತ್ವದ ಮಾಹಿತಿಯೊಂದಿದೆ. ಇನ್ನು ಮುಂದೆ ದೇವಾಲಯಕ್ಕೆ ತೆರಳು ಭಕ್ತರಿಗೆ ದೇಗುಲದ ಆಡಳಿತ ಮಂಡಳಿ ಹೊಸ ನಿಯಮವೊಂದನ್ನು ಜಾರಿ ಮಾಡುತ್ತಿದೆ. ಇನ್ನು ಮುಂದೆ ದೇಗುಲಕ್ಕೆ ತೆರಳುವ ಡ್ರೆಸ್‌ ಕೋಡ್‌ ಅನ್ನು ಜಾರಿಗೊಳಿಸಲು ಮುಂದಾಗಿದೆ.

ಪುರಿ ಜಗನ್ನಾಥ ದೇಗುಲಕ್ಕೆ ದೇಶ, ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇನ್ನು ಮುಂದೆ ದೇವಾಲಯಕ್ಕೆ ಆಗಮಿಸುವ ಭಕ್ತರು ಹರಿದ ಜೀನ್ಸ್​, ಸ್ಕರ್ಟ್​ ತೊಟ್ಟು ಬರುವಂತಿಲ್ಲ.ದೇವಸ್ಥಾನದಲ್ಲಿ ಕೆಲವರು ಅಸಭ್ಯ ವಸ್ತ್ರಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

2024 ಜನವರಿ 1ರಿಂದ ದೇವಾಲಯದೊಳಗೆ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ದೇವಾಲಯದ ‘ಸಿಂಗ ದ್ವಾರ’ದಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಮತ್ತು ದೇವಾಲಯದೊಳಗಿನ ಪ್ರತೀಹಾರಿ ಸೇವಕರಿಗೆ ಕೋಡ್ ಅನ್ನು ಜಾರಿಗೊಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಬಸ್‌ ಶೆಲ್ಟರ್‌ ಕಳ್ಳತನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌! – ಪೊಲೀಸ್‌ ತನಿಖೆಯಲ್ಲಿ ಬಯಲಾಗಿದ್ದೇನು?

ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ ಮುಖ್ಯಸ್ಥ ರಂಜನ್ ಕುಮಾರ್ ದಾಸ್ ಮಾತನಾಡಿ, ದೇವಾಲಯವು ಜನವರಿ 1 ರಿಂದ ಭಕ್ತರಿಗೆ ಡ್ರೆಸ್ ಕೋಡ್ ಜಾರಿಗೊಳಿಸಲಿದೆ. ದೇವಸ್ಥಾನದಲ್ಲಿ ಕೆಲವರು ಅಸಭ್ಯ ವಸ್ತ್ರಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದ ಘನತೆ ಮತ್ತು ಪಾವಿತ್ರ್ಯತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ದುರದೃಷ್ಟವಶಾತ್, ಕೆಲವರು ಇತರರ ಧಾರ್ಮಿಕ ಭಾವನೆಗಳನ್ನು ಲೆಕ್ಕಿಸದೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

Shwetha M