ದೇವೀರಮ್ಮನ ದೇಗುಲಕ್ಕೆ ಬರುವ ಭಕ್ತರಿಗೆ ಡ್ರೆಸ್ ಕೋಡ್ – ಪ್ರೀ ವೆಡ್ಡಿಂಗ್ ಶೂಟ್, ರೀಲ್ಸ್‌ಗೂ ನಿಷೇಧ

ದೇವೀರಮ್ಮನ ದೇಗುಲಕ್ಕೆ ಬರುವ ಭಕ್ತರಿಗೆ ಡ್ರೆಸ್ ಕೋಡ್ – ಪ್ರೀ ವೆಡ್ಡಿಂಗ್ ಶೂಟ್, ರೀಲ್ಸ್‌ಗೂ ನಿಷೇಧ

ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ದ ದೇವಿರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇನ್ನು ಮುಂದೆ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ದೇವಸ್ಥಾನದ ಆವರಣಕ್ಕೆ ಆಗಮಿಸಬೇಕು ಅಂತಾ  ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ.

ಇದನ್ನೂ ಓದಿ: ಚಂದ್ರನಿಗೆ ಇನ್ನಷ್ಟು ಹತ್ತಿರ ಸಮೀಪಿಸಿದ ಚಂದ್ರಯಾನ – 3 ಗಗನನೌಕೆ – 2.6 ಲಕ್ಷ ಕಿ.ಮೀ. ಕ್ರಮಿಸಿದ ಲ್ಯಾಂಡರ್​

ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿಯ ಆದೇಶದ ಪ್ರಕಾರ, ಬಿಂಡಿಗ ದೇವಿರಮ್ಮನ ದೇವಾಲಯಕ್ಕೆ ಸ್ಕರ್ಟ್, ಮಿಡಿ, ಸ್ಲೀವ್‌ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ. ದೇವಾಲಯದ ಆವರಣದೊಳಗೆ ಮೊಬೈಲ್  ಫೋನ್‌ ಬಳಕೆ ಮಾಡುವುದನ್ನು ಕೂಡ ನೀಷೇಧ ಮಾಡಲಾಗಿದೆ.

ದೀಪಾವಳಿ ವೇಳೆ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರತಿವರ್ಷ ಲಕ್ಷಾಂತರ ಭಕ್ತರು ದೇವಿರಮ್ಮನ ಬೆಟ್ಟ ಹತ್ತುತ್ತಾರೆ. ಮಧ್ಯರಾತ್ರಿಯೇ ಪಿರಮಿಡ್ ಆಕಾರದ ಬೆಟ್ಟ ಹತ್ತಿ ಭಕ್ತಿ ಸಮರ್ಪಿಸುತ್ತಾರೆ. ದೇವಾಲಯಕ್ಕೆ ಯಾರೇ ಬಂದರೂ ಸಾಂಪ್ರದಾಯಿಕ ಉಡುಗೆಯಲ್ಲೇ ಬರಬೇಕೆಂದು ದೇವಾಲಯ ಸೂಚನೆ ನೀಡಿದೆ. ದೇವಾಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಹಾಗೂ ರೀಲ್ಸ್‌ ಮಾಡಬಾರದು ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ.

suddiyaana