ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ! – ಆಮೇಲೆ ಏನಾಯ್ತು?

ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಸದ್ಯ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಚೇಸಿಂಗ್ನಲ್ಲಿ ಸೋತ ಆರ್ಸಿಬಿ – ಮಾರ್ಷ್ ಶತಕ, ಪ್ರಿನ್ಸ್ ಬೌಲಿಂಗ್ ನಿಂದ ಗೆದ್ದ ಪಂತ್ ಪಡೆ
ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ಇಳಿದು ವಾಲಿಕೊಂಡು ನಿಂತಿದೆ. ಇತ್ತ ಚಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಕ್ಷಣವೇ ಚಾಲಕನನ್ನು ಮಡಿಕೇರಿ ಬಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತನಗೆ ಹೃದಯಘಾತವಾಗುತ್ತಿದ್ದಂತೆ ಬಸ್ ಚಾಲಕನ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ. ಅಷ್ಟೊರಳಗೆ ತೀವ್ರವಾಗಿ ಹೃದಯಾಘಾತವಾಗಿದೆ. ಆದರೂ ಬಸ್ ಚರಂಡಿಯತ್ತ ಇಳಿಸಿದ್ದಾರೆ. ಪರಿಣಾಮ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬಸ್ ವಾಲಿಕೊಂಡು ನಿಂತಿದೆ. ಇದರ ಪರಿಣಾಮ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಬದಿಯಲ್ಲಿ ಬಸ್ ವಾಲಿಕೊಂಡು ನಿಂತ ಕಾರಣ ಹೆದ್ದಾರಿಯಲ್ಲಿ ಇತರ ವಾಹನ ಸಂಚಾರಕ್ಕೆ ಯಾವುದೇ ಅಡೆ ತಡೆ ಆಗಿಲ್ಲ. ಇತ್ತ ಬಸ್ನಲ್ಲಿದ್ದ ಪ್ರಯಾಣಿಕರು ಕೆಲ ಕಾಲ ಆತಂಕಗೊಂಡಿದ್ದರು. ಪ್ರಯಾಣಿಕರಿಗೆ ಇತರ ವಾಹನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ನೋಡಿರಿ

