ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲೇ ಮಲಗಿದ..! – ಸುತ್ತ – ಮುತ್ತ ವಾಹನ ಸಂಚರಿಸಿದ್ರೂ ನಿದ್ರೆಯಿಂದ ಎಚ್ಚರಗೊಳ್ಳಲೇ ಇಲ್ಲ!

ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲೇ ಮಲಗಿದ..! – ಸುತ್ತ – ಮುತ್ತ ವಾಹನ ಸಂಚರಿಸಿದ್ರೂ ನಿದ್ರೆಯಿಂದ ಎಚ್ಚರಗೊಳ್ಳಲೇ ಇಲ್ಲ!

ಕಂಠಪೂರ್ತಿ ಕುಡಿದವರಿಗೆ ಪ್ರಪಂಚದ ಅರಿವೇ ಇರಲ್ಲ. ತಾನು ನಡೆದಿದ್ದೇ ದಾರಿ.. ನಿಂತಿರುವ ಸ್ಥಳ ನಂದೇ ಅಂತಾ ಸೀನ್‌ ಕ್ರಿಯೇಟ್‌ ಮಾಡುತ್ತಾರೆ. ಕುಡಿದ ಮತ್ತಿನಲ್ಲಿ ತಾನು ಎಲ್ಲಿದ್ದೇನೆ ಎಂಬುವುದು ಅರಿವಿರುವುದಿಲ್ಲ. ತೂರಾಡಿಕೊಂಡು ಹೋದಲ್ಲೆಲ್ಲಾ ಬೀಳುತ್ತಾರೆ. ಎಣ್ಣೆ ನಶೆ ಇಳಿಯುವವರೆಗೂ ಅಲ್ಲೇ ರಂಪಾಟ ನಡೆಸುತ್ತಾ ಇರುತ್ತಾರೆ. ಇಲ್ಲೊಬ್ಬನ ಸ್ಥಿತಿಯೂ ಹಾಗೇ ಆಗಿದೆ. ಕಂಠಪೂರ್ತಿ ಕುಡಿದು ಮನೆಗೆ ಹೋಗಲಾಗದೇ ನಡು ರಸ್ತೆಯಲ್ಲೇ ಮಲಗಿ ಎಲ್ಲರನ್ನೂ ಬೆಚ್ಚಿಬೀಳಿಸುವಂತೆ ಮಾಡಿದ್ದಾನೆ.

ಇದನ್ನೂ ಓದಿ: ಹೊಟ್ಟೆನೋವೆಂದು ಆಸ್ಪತ್ರೆಗೆ ಸೇರಿದ 9 ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ! – ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ!

ಹೌದು, ಕೆಲವರು ಎಣ್ಣೆ ಏಟಲ್ಲಿ ಏನ್‌ ಬೇಕಾದ್ರೂ ಮಾಡ್ತಾರೆ. ಕೆಲವೊಮ್ಮೆ ಆ ವ್ಯಕ್ತಿ ತಾನೇನು ಮಾಡುತ್ತಿದ್ದೇನೆ ಎಂಬುದನ್ನೇ ಮರೆತು ಬಿಡುತ್ತಾನೆ. ಈ ಸಂದರ್ಭದಲ್ಲಿ ಆತನಿಗೆ ಯಾವ ಭಯವೂ ಇರುವುದಿಲ್ಲ. ಅಂತೆಯೇ ಇಲ್ಲೊಬ್ಬ ವ್ಯಕ್ತಿ ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಗಾಢವಾಗಿ ನಿದ್ದೆ ಮಾಡಿದ್ದಾನೆ. ರಸ್ತೆಯಲ್ಲಿ ಎಷ್ಟು ವಾಹನಗಳು ಓಡಾಡಿದ್ರೂ ಏಳದೇ ರಸ್ತೆಯಲ್ಲೇ ಮಲಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಹಳಸೆ ಗ್ರಾಮದ ಬಳಿ ಕುಡಿತ ಮತ್ತಿನಲ್ಲಿ ವ್ಯಕ್ತಿ ಮಧ್ಯರಾತ್ರಿ ವೇಳೆ ರಸ್ತೆ ಮಧ್ಯೆಯೇ ಗಡದ್ದಾಗಿ ನಿದ್ದೆ ಮಾಡಿದ್ದಾನೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ವಾಹನ ಸಾವರರೊಬ್ಬರು ವ್ಯಕ್ತಿಯನ್ನು ಕಂಡು ಗಾಬರಿಗೊಂಡಿದ್ದಾರೆ. ಚಾಲಕರು ಎಷ್ಟೇ ಹಾರ್ನ್ ಮಾಡಿದರೂ ವ್ಯಕ್ತಿ ಎದ್ದೇಳುವ ಲಕ್ಷಣ ಕಾಣುತ್ತಿಲ್ಲ. ಆ ಬಳಿಕ ಕೆಲ ಹೊತ್ತು ಎದ್ದು ಕುಳಿತು ಮತ್ತೆ ಅದೇ ಜಾಗದಲ್ಲಿ ಮಲಗಿದ್ದಾನೆ. ಒಟ್ಟಾರೆಯಾಗಿ ಎಣ್ಣೆ ಮತ್ತಿನಲ್ಲಿ ವ್ಯಕ್ತಿಯ ಚೆಲ್ಲಾಟದಿಂದ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.

Shwetha M