ಎರಡನೇ ಮಗುವಿನ ನಿರೀಕ್ಷೆಯಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವಸರ್ಜಾ – ಸೆಪ್ಟೆಂಬರ್ ನಲ್ಲಿ 2ನೇ ಮಗುವಿಗೆ ತಾಯಿ ಆಗಲಿದ್ದಾರೆ ಪ್ರೇರಣಾ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವಸರ್ಜಾ – ಸೆಪ್ಟೆಂಬರ್ ನಲ್ಲಿ 2ನೇ ಮಗುವಿಗೆ ತಾಯಿ ಆಗಲಿದ್ದಾರೆ ಪ್ರೇರಣಾ

ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆ ಆಗಿದ್ದು, ಈ ದಂಪತಿಗೆ ಕಳೆದ ವರ್ಷ ಅಕ್ಟೋಬರ್​ 2ರಂದು ಅವರಿಗೆ ಹೆಣ್ಣು ಮಗು ಜನಿಸಿತು. ಈಗ ಧ್ರುವ ಹಾಗೂ ಪ್ರೇರಣಾ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರೇರಣಾ ಮತ್ತೆ ತಾಯಿ ಆಗುತ್ತಿದ್ದಾರೆ.

ಇದನ್ನೂ ಓದಿ : ಅತ್ಯುತ್ತಮ ನಟ ಪ್ರಶಸ್ತಿ ಮೂಲಕ ತೆಲುಗು ಚಿತ್ರರಂಗದಲ್ಲಿ ಇತಿಹಾಸ ಬರೆದ ಅಲ್ಲು ಅರ್ಜುನ್ – ‘ಗಂಗೋತ್ರಿ’ಯಿಂದ ‘ಪುಷ್ಪ’ರಾಜ್ ವರೆಗಿನ ಸಿನಿಪಯಣವೇ ರೋಚಕ

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಬಗ್ಗೆ ಧ್ರುವ ಸರ್ಜಾ ಗುಡ್ ನ್ಯೂಸ್ ಹೇಳಿದ್ದಾರೆ. ಸ್ಪೆಷಲ್ ವಿಡಿಯೋ ಮೂಲಕ ಹೊಸ ಅತಿಥಿಯ (Second Baby) ಆಗಮನದ ಬಗ್ಗೆ ಅಪ್‌ಡೇಟ್ ಹಂಚಿಕೊಂಡಿದ್ದಾರೆ. 2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆ ಆಗಿದ್ದರು. ಕಳೆದ ವರ್ಷ ಅಕ್ಟೋಬರ್​ 2ರಂದು ಅವರಿಗೆ ಹೆಣ್ಣು ಮಗು ಜನಿಸಿತು. ಈಗ ಧ್ರುವ ಹಾಗೂ ಪ್ರೇರಣಾ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರೇರಣಾ ಮತ್ತೆ ತಾಯಿ ಆಗುತ್ತಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ ಧ್ರುವ.

ಗ್ರಾಫಿಕ್ಸ್ ವಿಡಿಯೋ ಒಂದನ್ನು ಮಾಡಲಾಗಿದೆ. ಎಲ್ಲರಿಗೂ ಒಂದು ಸರ್​ಪ್ರೈಸ್ ಇದೆ ಎಂದು ಮೊದಲು ಹೇಳಲಾಗಿದೆ. ವಿಡಿಯೋ ಕೊನೆಯಲ್ಲಿ ಧ್ರುವ ಮಗಳನ್ನು ಎತ್ತಿಕೊಂಡಿರುತ್ತಾರೆ. ವಿಡಿಯೋ ಕೊನೆಯಲ್ಲಿ ಪ್ರೇರಣಾ ಪ್ರೆಗ್ನೆಂಟ್ ಅನ್ನೋ ವಿಚಾರವನ್ನು ಧ್ರುವ ರಿವೀಲ್ ಮಾಡುತ್ತಾರೆ. ಸದ್ಯ ಧ್ರುವ ಸರ್ಜಾಗೆ ಎಲ್ಲರೂ ವಿಶ್ ತಿಳಿಸುತ್ತಿದ್ದಾರೆ. ಸೆಪ್ಟೆಂಬರ್​ನಲ್ಲಿ ಮಗು ಜನಿಸಲಿದೆ ಎಂದು ಧ್ರುವ ತಿಳಿಸಿದ್ದಾರೆ. ಇನ್ನು ಧ್ರುವ ಸರ್ಜಾಗೆ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಮಾರ್ಟಿನ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಚಿತ್ರ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಇದರ ಜೊತೆಗೆ ‘ಕೆಡಿ’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಅವರು ಖಡಕ್ ವಿಲನ್ ಪಾತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

suddiyaana