ಅಫ್ಘಾನಿಸ್ತಾನದಲ್ಲಿ ಮುಂದುವರಿದ ಮರಣ ಮೃದಂಗ! – ಭೂಕಂಪದ ತೀವ್ರತೆಗೆ 4,000 ಮಂದಿ ಬಲಿ, 2 ಸಾವಿರಕ್ಕೂ ಅಧಿಕ ಮನೆಗಳು ಸರ್ವನಾಶ!

ಅಫ್ಘಾನಿಸ್ತಾನದಲ್ಲಿ ಮುಂದುವರಿದ ಮರಣ ಮೃದಂಗ! – ಭೂಕಂಪದ ತೀವ್ರತೆಗೆ 4,000 ಮಂದಿ ಬಲಿ, 2 ಸಾವಿರಕ್ಕೂ ಅಧಿಕ ಮನೆಗಳು ಸರ್ವನಾಶ!

ಕಾಬೂಲ್: ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಸರಣಿ ಭೂಕಂಪದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಲೇ ಇದೆ. ಇದೀಗ ಈ ಅವಘಡದಲ್ಲಿ 4000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಕಳೆದ ಶನಿವಾರ ಮಧ್ಯಾಹ್ನದ ವೇಳೆಗೆ 6.2 ತೀವ್ರತೆಯ 2 ಭೀಕರ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆಗೆ 20 ಕ್ಕೂ ಹೆಚ್ಚು ಗ್ರಾಮಗಳು ಸರ್ವನಾಶವಾಗಿವೆ. 2000ಕ್ಕೂ ಅಧಿಕ ಮನೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಸ್ಟಾರ್ ಆಟಗಾರ ಶುಭಮನ್ ಗಿಲ್ – ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದಲ್ಲೂ ಗಿಲ್ ಆಡೋದು ಡೌಟ್?

ಭೂಕಂಪನ ದುರಂತದಿಂದಾಗಿ ಇದುವರೆಗಿನ ದುರದೃಷ್ಟವಶಾತ್ 4,000 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಮ್ಮ ಅಂಕಿಅಂಶಗಳ ಪ್ರಕಾರ ಸುಮಾರು 20 ಹಳ್ಳಿಗಳಲ್ಲಿ, ಸರಿಸುಮಾರು 1,980 ರಿಂದ 2,000 ಮನೆಗಳು ಸಂಪೂರ್ಣವಾಗಿ ಕುಸಿದಿವೆ. ವಿವಿಧ ಸಂಸ್ಥೆಗಳ 35 ರಕ್ಷಣಾ ತಂಡಗಳಲ್ಲಿ ಒಟ್ಟು 1,000 ಕ್ಕೂ ಹೆಚ್ಚು ರಕ್ಷಕರು ಪೀಡಿತ ಪ್ರದೇಶಗಳಲ್ಲಿ ಪರಿಹಾರ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂದು ವಕ್ತಾರ ಮುಲ್ಲಾ ಸಾಯಿಕ್ ಕಾಬೂಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಹಂಗಾಮಿ ಪ್ರಧಾನಿ ಮೊಹಮ್ಮದ್ ಹಸನ್ ಅಖುಂಡ್ ಅವರು ಹೆರಾತ್ ಪ್ರಾಂತ್ಯದ ಭೂಕಂಪದಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಚೀನಾ ಅಫ್ಘಾನ್ ರೆಡ್ ಕ್ರೆಸೆಂಟ್‌ಗೆ 2,00,000 ಅಮೆರಿಕನ್ ಡಾಲರ್‌ಗಳನ್ನು ತುರ್ತು ಮಾನವೀಯ ನೆರವಾಗಿ ಅದರ ರಕ್ಷಣೆ ಮತ್ತು ವಿಪತ್ತು ಪರಿಹಾರ ಪ್ರಯತ್ನಗಳಿಗೆ ಸಹಾಯ ಮಾಡಲು ಒದಗಿಸಿದೆ ಎಂದು ವರದಿಯಾಗಿದೆ.

Shwetha M