ದಸರಾ ಗಜಪಡೆಗೆ ಇಸಿಜಿ ಟೆಸ್ಟ್ –ಇತಿಹಾಸದಲ್ಲೇ ಇದೇ ಮೊದಲ ಬಾರಿ ಆನೆಗಳ ಹೃದಯ ತಪಾಸಣೆ

ದಸರಾ ಗಜಪಡೆಗೆ ಇಸಿಜಿ ಟೆಸ್ಟ್ –ಇತಿಹಾಸದಲ್ಲೇ ಇದೇ ಮೊದಲ ಬಾರಿ ಆನೆಗಳ ಹೃದಯ ತಪಾಸಣೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆಯಿಂದ ತಯಾರಿ ನಡೆದಿದೆ.  ಗಜಪಡೆಯ ಆಯ್ಕೆ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ. ಇದರ ಜೊತೆಗೆ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಸರಾ ಆನೆಗಳ ಹೃದಯದ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಇದನ್ನೂ ಓದಿ:160 ತೂಗು ಸೇತುವೆ ನಿರ್ಮಿಸಿದ ಸುಳ್ಯದ ಸೇತುವೆ ಮನುಷ್ಯ ಇನ್ನಿಲ್ಲ – ಡಾ. ಗಿರೀಶ್ ಭಾರದ್ವಾಜ್ ವಿಧಿವಶ

ವಿಶ್ವವಿಖ್ಯಾತ ನಾಡಹಬ್ಬದ ಪ್ರಮುಖ ಆಕರ್ಷಣೆ ಅಂದರೆ ಜಂಬೂಸವಾರಿ. ಈಗಾಗಲೇ ಮೈಸೂರು ದಸರಾ ಮಹೋತ್ಸವಕ್ಕೆ ಗಜಪಡೆಯ ಆಯ್ಕೆ ಪ್ರಕ್ರಿಯೆಗೆ ಅರಣ್ಯ ಇಲಾಖೆ ಚಾಲನೆ ನೀಡಿದೆ. ಇದರ ಜೊತೆಗೆ . ಇದರ ಜೊತೆಗೆ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಸರಾ ಆನೆಗಳ ಹೃದಯದ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆನೆ ಶಿಬಿರಗಳಿಗೆ ಈಗಾಗಲೇ ತಜ್ಞ ವೈದ್ಯರ ಭೇಟಿ ನೀಡಿದ್ದಾರೆ. , ಮತ್ತಿಗೋಡು, ದುಬಾರೆ ಮತ್ತು ರಾಮಾಪುರ ಆನೆಗಳ ಶಿಬಿರಗಳಿಗೆ ಪಶುವೈದ್ಯಾಧಿಕಾರಿಗಳ ವಿಶೇಷ ತಜ್ಞರ ತಂಡವು ಈಗಾಗಲೇ ಭೇಟಿ ನೀಡಿದೆ. ಶಿಬಿರಗಳಲ್ಲಿರುವ ಸುಮಾರು 20ಕ್ಕೂ ಹೆಚ್ಚು ಆನೆಗಳ ಆರೋಗ್ಯವನ್ನು ಕೂಲಂಕಷವಾಗಿ ತಪಾಸಣೆ ಮಾಡಲಾಗಿದ್ದು, ತದನಂತರ ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.

ಶಿಬಿರಗಳಲ್ಲಿರುವ ಹೆಣ್ಣಾನೆಗಳ ಗರ್ಭಧಾರಣೆಯನ್ನು ನಿಖರವಾಗಿ ಪರೀಕ್ಷಿಸಲು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮುಖಾಂತರ ತಪಾಸಣೆ ಮಾಡಲಾಗುತ್ತದೆ. ಇದರ ಜೊತೆಗೆ, ಅತ್ಯಂತ ಪ್ರಮುಖವಾಗಿ ಈ ಬಾರಿ ಮೊಟ್ಟಮೊದಲ ಬಾರಿಗೆ ಆನೆಗಳ ಹೃದಯದ ಆರೋಗ್ಯ ಮತ್ತು ಸಾಮರ್ಥ್ಯವನ್ನು ಪರೀಕ್ಷಿಸಲು ಇಸಿಜಿ  ಪರೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಪ್ರಯೋಗಾಲಯಗಳಿಂದ ವೈದ್ಯಕೀಯ ವರದಿಗಳು ಬಂದ ತಕ್ಷಣ, ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದ ಅಧಿಕೃತ ತಂಡವು ವಿವಿಧ ಆನೆ ಶಿಬಿರಗಳಿಗೆ ಖುದ್ದಾಗಿ ಭೇಟಿ ನೀಡಿ ಅಂತಿಮವಾಗಿ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ. ಆನೆಗಳ ಈ ತಾತ್ಕಾಲಿಕ ಆಯ್ಕೆಯ ಪಟ್ಟಿಯನ್ನು ಎಲ್ಲಾ ಆರೋಗ್ಯ ವಿವರಗಳೊಂದಿಗೆ ರಾಜ್ಯ ಮಟ್ಟದ ದಸರಾ ಆನೆಗಳ ಆಯ್ಕೆ ಸಮಿತಿಗೆ ಸಲ್ಲಿಕೆ ಮಾಡಲಾಗುತ್ತದೆ. ಒಟ್ನಲ್ಲಿ, ಈ ಬಾರಿ ನಾಡಹಬ್ಬಕ್ಕೆ ಆಗಮಿಸುವ ಗಜಪಡೆಗಳ ಆರೋಗ್ಯದ ಬಗ್ಗೆಯೂ ಗಮನ ಹರಿಸಲಾಗುತ್ತದೆ.

Sulekha

Leave a Reply

Your email address will not be published. Required fields are marked *