35 ಕೋಟಿ ರೂಪಾಯಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!- ಕಾಂಗ್ರೆಸ್‌ ಸಚಿವ ಅರೆಸ್ಟ್‌

35 ಕೋಟಿ ರೂಪಾಯಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!- ಕಾಂಗ್ರೆಸ್‌ ಸಚಿವ ಅರೆಸ್ಟ್‌

ಕಳೆದ ವಾರ ಜಾರ್ಖಂಡ್ ನಲ್ಲಿ ಕಾಂಗ್ರೆಸ್ ಸಚಿವನ ಮನೆಯಲ್ಲಿ ಹಣದ ರಾಶಿ ಪತ್ತೆಯಾಗಿತ್ತು. ರಾಜ್ಯ ಆಡಳಿತ ಸೇವಾ ಅಧಿಕಾರಿ ಸಂಜೀವ್ ಕುಮಾರ್ ಲಾಲ್​ ಅವರನ್ನು ಈ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಅರೆಸ್ಟ್‌ ಮಾಡಿದ್ದರು. ಇದೀಗ ಈ ಕೇಸ್‌ ಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ  ಜಾರ್ಖಂಡ್ ನ ಕಾಂಗ್ರೆಸ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಇದನ್ನೂ ಓದಿ: ಎಸ್‌ಐಟಿಗೆ ಕಗ್ಗಂಟಾದ ಪ್ರಜ್ವಲ್‌ ರೇವಣ್ಣ ಪ್ರಕರಣ – ಭವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡಿ ಎಂದು ಸರ್ಕಾರ ಸೂಚನೆ ಕೊಟ್ಟಿದ್ದೇಕೆ?

ಕಳೆದ ವಾರ ಆಲಂ ಅವರ ಆಪ್ತ ಕಾರ್ಯದರ್ಶಿ ಹಾಗೂ ರಾಜ್ಯ ಆಡಳಿತ ಸೇವಾ ಅಧಿಕಾರಿ ಸಂಜೀವ್ ಕುಮಾರ್ ಲಾಲ್​ರನ್ನ ಇಡಿ ಬಂಧಿಸಿ, ಅವರಿಗೆ ಸಂಬಂಧಿಸಿದ ಫ್ಲಾಟ್‌ ಮೇಲೆ ದಾಳಿ ನಡೆಸಿ 35 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿತ್ತು. ಬಳಿಕ ಸಚಿವ ಅಲಂಗೀರ್‌ ಆಲಂ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆಯ ಬಳಿಕ ಅಲಂಗೀರ್ ಆಲಂರನ್ನ ಮನಿ ಲಾಂಡರಿಂಗ್ ಆಕ್ಟ್ ನಿಬಂಧನೆಗಳ ಅಡಿಯಲ್ಲಿ ತನಿಖಾ ಸಂಸ್ಥೆಯ ವಲಯ ಕಚೇರಿಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ಬೆನ್ನಲ್ಲೇ ರಾಂಚಿಯಲ್ಲಿರುವ ಇಡಿ ಕಚೇರಿಯ ಹೊರಗೆ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ಅಲಂಗೀರ್ಆಲಂ ಯಾರು..?

ಅಲಂಗೀರ್ ಆಲಂ ಅವರು ಪಾಕುರ್ ವಿಧಾನಸಭೆ ಕ್ಷೇತ್ರದ ಶಾಸಕ. ನಾಲ್ಕು ಬಾರಿ ಶಾಸಕನಾಗಿ ಆಯ್ಕೆ ಆಗಿರುವ ಇವರು, ಜಾರ್ಖಂಡ್ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿದ್ದಾರೆ. ಇದಕ್ಕೂ ಮೊದಲು ಅಲಂಗೀರ್​ ಅಲಂ ಅಂದರೆ 2006, ಅಕ್ಟೋಬರ್ 20 ರಿಂದ 2009 ಡಿಸೆಂಬರ್​ ವರೆಗೆ ಜಾರ್ಖಂಡ್ ವಿಧಾನಸಭೆಯ ಸ್ಪೀಕರ್ ಆಗಿದ್ದರು. 2000ರಲ್ಲಿ ನಡೆದ ಚುನಾವಣೆಯಲ್ಲಿ ಮೊದಲ ಬಾರಿಗೆ ವಿಧಾನಸಭೆಯನ್ನು ಪ್ರವೇಶ ಮಾಡಿದ್ದರು. ನಂತರ 4 ಬಾರಿ ಶಾಸಕರಾಗಿದ್ದಾರೆ.

Shwetha M