ಶರ್ಟ್ ಧರಿಸದೇ ಸಭೆಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ! – ಆ ಮೇಲೆ ಆಗಿದ್ದೇನು?
ಲಕ್ನೋ: ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಶರ್ಟ್ ಧರಿಸದೇ ಬನಿಯಾನ್‌ನಲ್ಲೇ ಸಭೆಗೆ ಹಾಜರಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ವಿಡಿಯೋ ಕಾನ್ಫರೆನ್ಸ್ ವೇಳೆ ಈ ಅಧಿಕಾರಿ ಶರ್ಟ್ ಧರಿಸದೇ, ಬನಿಯಾನ್ ನಲ್ಲಿ ಮೀಟಿಂಗ್ ಗೆ ಹಾಜರಾಗಿದ್ದಾರೆ. ಇದೀಗ ಈ ಅಧಿಕಾರಿ ಅಮಾನತುಗೊಂಡಿದ್ದಾರೆ. ಬನಿಯನ್ ಧರಿಸಿ ವಿಡಿಯೋ ಕಾನ್ಫರೆನ್ಸ್ ಸಭೆಗೆ ಹಾಜರಾಗಿರುವುದನ್ನು ಅನುಚಿತ ವರ್ತನೆ ಎಂದು ಪರಿಗಣಿಸಿ ಶಿಕ್ಷಣ ಇಲಾಖೆ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಇಡಿ ಅಧಿಕಾರಿಗಳು ಬಂಧಿಸುತ್ತಿದ್ದಂತೆ ಎದೆನೋವೆಂದು ಕಾರಿನಲ್ಲೇ ಬಿದ್ದು ಒದ್ದಾಡಿದ ಅಬಕಾರಿ ಸಚಿವ!
ಪರಿಶೀಲನಾ ಸಭೆಯಲ್ಲಿ ಶಿಕ್ಷಣ ಇಲಾಖೆ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್, ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ಇಲಾಖಾ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಕರೆದಿದ್ದರು. ಈ ಸಭೆಗೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಶರ್ಟ್ ಹಾಕದೆ, ಬನಿಯನ್ ಧರಿಸಿ ಬಂದಿದ್ದರು. ಇದನ್ನು ಗಮನಿಸಿದ ವಿಜಯ್ ಕಿರಣ್ ಆನಂದ್ ಅವರು ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.