ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ – ಪಿಯು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ – ಪಿಯು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.  ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ – ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ

ರಾಜ್ಯದ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ ಹಣ ಮೀಸಲು ಇಟ್ಟಿದ್ದಾರೆ. ಹಾಗೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ. ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ.

ಶಿಕ್ಷಕರು, ಉಪನ್ಯಾಸಕರ ನೇಮಕ ಪ್ರಕ್ರಿಯೆ ಪ್ರಾರಂಭ

ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (UVCE) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುತ್ತದೆ.

ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.

ಸೈನ್ಸ್ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಗೆ 10 ಕೋಟಿ ರೂ.

ರಾಜ್ಯದ 20 ಸಾವಿರ ಸೈನ್ಸ್ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಹಾಗೂ ಇಂಟರ್ನೆಟ್ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

 

Sulekha