ಪಾಕ್, ಭಾರತ ಯುದ್ಧದ ಎಫೆಕ್ಟ್! – ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತ ಪೊಲೀಸರ ಹದ್ದಿನ ಕಣ್ಣು

ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣತೆತ್ತರು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದೀಗ ದೇಶದಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಇದನ್ನೂ ಓದಿ: ಪ್ಲೇಆಫ್ಸ್ ಗೆ ಕೈಕೊಟ್ಟ RCB ಸ್ಟಾರ್ಸ್ – ಸಾಲ್ಟ್, ಶೆಫರ್ಡ್, ಜೋಶ್ ಆಡಲ್ವಾ?
ಆಪರೇಷನ್ ಸಿಂಧೂರ್ ನಡೆದ ಬಳಿಕ ದೇಶದ ಹಲವು ಭಾಗಗಳಲ್ಲಿ ಬೆದರಿಕೆ ಇಮೇಲ್, ಕರೆಗಳು ಬರುತ್ತಿವೆ. ಇದೀಗ ಪ್ರಮುಖ ಸ್ಥಳಗಳು ಹಾಗೂ ಜನಕೇಂದ್ರಿತ ಸ್ಥಳಗಳಲ್ಲಿ ಟೈಟ್ ಸೆಕ್ಯುರಿಟಿ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಪ್ರತೀ ಗೇಟ್ ಬಳಿಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೂರು ಪಾಳಿಗಳಲ್ಲಿ 70ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 13ರಂದು ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪಂದ್ಯ ನಡೆಯಲಿದೆ.