ಸಿದ್ದು ಮೇಲೆ ಮೊಟ್ಟೆ ಎಸೆದವರನ್ನ ಗಡಿಪಾರು ಮಾಡಲು ಶಿಫಾರಸು – ಹಿಂದೂ ಸಂಘಟನೆಗಳು ಕೆಂಡ!

ಸಿದ್ದು ಮೇಲೆ ಮೊಟ್ಟೆ ಎಸೆದವರನ್ನ ಗಡಿಪಾರು ಮಾಡಲು ಶಿಫಾರಸು – ಹಿಂದೂ ಸಂಘಟನೆಗಳು ಕೆಂಡ!

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಪ್ರಕರಣ ಅದು. ಅದೇ ಪ್ರಕರಣಕ್ಕೆ ಈಗ ಮತ್ತೊಂದು ತಿರುವು ಸಿಕ್ಕಿದೆ. ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಕೇಸ್ ಸಂಬಂಧ ಆರೋಪಿಗಳಿಗೆ ಎಸಿ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹಾಗೇ ನಿಮ್ಮನ್ನು ಯಾಕೆ‌ ಗಡಿ ಪಾರು ಮಾಡಬಾರದೆಂದು ಕಾರಣ ಕೇಳಿ‌ದೆ. ಆದ್ರೆ ಇದಕ್ಕೆ  ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು ಹೋರಾಟದ ಹಾದಿ ತುಳಿದಿವೆ.

ಇದನ್ನೂ ಓದಿ :  ಮೊದಲ ಪಟ್ಟಿಯಲ್ಲಿ 130 ಜನ್ರಿಗೆ ‘ಕೈ’ ಟಿಕೆಟ್ – ಸಿದ್ದು, ಡಿಕೆಶಿ, ಸುರ್ಜೇವಾಲಾ ಮೀಟಿಂಗ್.. ಯಾರಿಗೆ ಲಕ್?

ಕೊಡಗಿನಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿಗಳನ್ನ ಗಡಿಪಾರು ಮಾಡಲು ಮುಂದಾಗಿರುವುನ್ನ ಖಂಡಿಸಿ ಹಿಂದೂಪರ ಸಂಘಟನೆಗಳು  ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿವೆ. ಆರೋಪಿಗಳ ಗಡಿಪಾರಿಗೆ ಪೊಲೀಸ್ ಇಲಾಖೆಯು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಶಿಫಾರಸು ಮಾಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಹಿಂದೂ ಕಾರ್ಯಕರ್ತರು ಗಡಿಪಾರು ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಮಡಿಕೇರಿ ನಗರದ ಜ. ತಿಮ್ಮಯ್ಯ ವೃತ್ತದಲ್ಲೂ ಪ್ರತಿಭಟನೆ ನಡೆಸಿದ್ದಾರೆ. ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಕವನ್ ಕಾವೇರಪ್ಪ, ವಿನಯ್ ಗಡಿಪಾರಿಗೆ ಪೊಲೀಸ್ ಇಲಾಖೆ ಶಿಫಾರಸು ಮಾಡಿದ ಹಿನ್ನೆಲೆ ಎಸಿ ಯತೀಶ್ ಉಲ್ಲಾಳ್ ಅವರು ಆರೋಪಿಗಳಿಗೆ ನಿನ್ನೆ (ಫೆಬ್ರವರಿ 1) ನೋಟಿಸ್ ಜಾರಿ ಮಾಡಿ ನಿಮ್ಮನ್ನು ಯಾಕೆ‌ ಗಡಿ ಪಾರು ಮಾಡಬಾರದೆಂದು ಕಾರಣ ಕೇಳಿದ್ದರು.

ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.  ಮಡಿಕೇರಿಯಲ್ಲಿ ಮಳೆಯ ಅವಾಂತರಗಳಿಂದಾಗಿ ಅನೇಕ ನಷ್ಟ ಸಂಭವಿಸಿದ್ದು, ಇದನ್ನು ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಭೇಟಿ ಕೊಟ್ಟಿದ್ದರು. ಇದಕ್ಕೂ ಮುನ್ನ ಅವರು ನೀಡಿದ ಹೇಳಿಯಿಂದ ಕೆರಳಿದ ಬಿಜೆಪಿ ಕಾರ್ಯಕರ್ತರು ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾಮದಲ್ಲಿ ಭಾರೀ ಪ್ರತಿಭಟನೆ, ಆಕ್ರೋಶವನ್ನು ಎದುರಿಸಿದ್ದರು. ಇದೇ ವೇಳೆ ಅವರ ಕಾರಿಗೆ ಮೊಟ್ಟೆಯನ್ನು ಎಸೆಯಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

suddiyaana