ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬುಕ್ಕಿಂಗ್ ಎಲೆಕ್ಷನ್? – ಉಪ್ಪು ಮುಟ್ಟಿ ‘ಕೈ’ ಅಭ್ಯರ್ಥಿ ಪ್ರಮಾಣ..!

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬುಕ್ಕಿಂಗ್ ಎಲೆಕ್ಷನ್? – ಉಪ್ಪು ಮುಟ್ಟಿ ‘ಕೈ’ ಅಭ್ಯರ್ಥಿ ಪ್ರಮಾಣ..!

ಚುನಾವಣೆ ಮುಗಿದ ಮರುದಿನವೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬುಕ್ಕಿಂಗ್ ಮಾತು ಕೇಳಿಬರುತ್ತಿದೆ. ಮೈಸೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಒಬ್ಬ ಮೋಸಗಾರ ಎಂದು ಕಿಡಿಕಾರಿದ್ದಾರೆ. ಅವನೊಬ್ಬ ಮೋಸಗಾರ. ಅವನು ಇಂಥವನು ಅಂತ ಗೊತ್ತಿದ್ದರೆ ನಮ್ಮ ಹುಡುಗನನ್ನೇ ನಿಲ್ಲಿಸುತ್ತಿದ್ದೆ ಎಂದು ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲಿಯೇ ಮಾವಿನಹಳ್ಳಿ ಸಿದ್ದೇಗೌಡ, ನಾನು ಯಾರ ಜೊತೆಯೂ ಬುಕ್ಕಿಂಗ್ ಆಗಿಲ್ಲ ಎಂದು ಉಪ್ಪು ಮುಟ್ಟಿ ಪ್ರಮಾಣ ಮಾಡಿದ್ದಾರೆ.

ಇದನ್ನೂ ಓದಿ:  ‘ಅವನೊಬ್ಬ ಮೋಸಗಾರ.. ಮೊದಲೇ ಗೊತ್ತಿದ್ದರೆ ಟಿಕೆಟ್ ಕೊಡ್ತಿರಲಿಲ್ಲ’ – ಚಾಮುಂಡೇಶ್ವರಿ ಕ್ಷೇತ್ರದ ‘ಕೈ’ ಅಭ್ಯರ್ಥಿ ವಿರುದ್ಧ ಸಿದ್ದು ಕಿಡಿ!

ಸಿದ್ದರಾಮಯ್ಯ ಗರಂ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಮಾವಿನಹಳ್ಳಿ ಸಿದ್ದೇಗೌಡ, ನಾನು ಯಾವ ಒಳ ಒಪ್ಪಂದವನ್ನು ಮಾಡಿಕೊಂಡಿಲ್ಲ, ಇದು ಮೂಲ ಕಾಂಗ್ರೆಸಿಗ ಮರಿಗೌಡನ ಪಿತೂರಿ, ಜನರ ಗುಂಪು ಕಟ್ಟಿಕೊಂಡು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಹಾಳಾಗಲು ಮರಿಗೌಡ ಕಾರಣ, ನಾನು ಬುಕ್ ಆಗಿಲ್ಲ. ಜಿಟಿ ದೇವೇಗೌಡ ಅವರ ಮನೆ ಬಾಗಿಲಿಗೂ ಹೋಗಿಲ್ಲ, ನಾನು ಸೋಲಲಿ ಅಥವಾ ಗೆಲ್ಲಲಿ ಸಿದ್ದರಾಮಯ್ಯ ಅವರನ್ನು ಹೋಗಿ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವರ್ತನೆ ಕುರಿತು ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಬಳಿ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ಸಿದ್ದರಾಮಯ್ಯ ಕೂಡ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದರು. ಸಿದ್ದರಾಮಯ್ಯ ಆಕ್ರೋಶದ ಬೆನ್ನಲ್ಲಿಯೇ ಮಾವಿನಹಳ್ಳಿ ಸಿದ್ದೇಗೌಡ ಉಪ್ಪು ಮುಟ್ಟಿ ಪ್ರಮಾಣ ಮಾಡಿದ್ದು, ನಾನು ಯಾರ ಜೊತೆ ಬುಕ್ಕಿಂಗ್ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವಿಚಾರಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಜಿಟಿ ದೇವೇಗೌಡ ಕೂಡ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣ ಗೊತ್ತಿಲ್ಲ ಎಂದು ಹೇಳಿದ್ದಾರೆ. ನನ್ನ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಎಂಬುದು ಅವರಿಗೆ ಗೊತ್ತಿಲ್ಲ ಎಂದಿದ್ದಾರೆ.

ಇನ್ನು, ಕಳೆದ ನಾಲ್ಕು ದಿನಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡರು ಮತದಾರರ ಕೈಗೆ ಸಿಗದೆ ನಾಪತ್ತೆಯಾಗುವ ಮೂಲಕ ಜಿಟಿ ದೇವೇಗೌಡರ ಗೆಲುವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ವಿಚಾರಕ್ಕೆ ಮಾವಿನಹಳ್ಳಿ ಸಿದ್ಧೇಗೌಡರ ವಿರುದ್ಧ ಸಿದ್ಧರಾಮಯ್ಯ ಕೂಡ ಗರಂ ಆಗಿದ್ದರು.

suddiyaana