ಬಿಡದಿ ತೋಟದ ಮನೆಯಲ್ಲಿ ಹೆಚ್‍ಡಿಕೆ ಔತಣಕೂಟ – ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟ ಎಲೆಕ್ಷನ್ ಕಮಿಷನ್

ಬಿಡದಿ ತೋಟದ ಮನೆಯಲ್ಲಿ ಹೆಚ್‍ಡಿಕೆ ಔತಣಕೂಟ – ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟ ಎಲೆಕ್ಷನ್ ಕಮಿಷನ್

ರಾಜ್ಯ ರಾಜಕೀಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಲೋಕಸಭಾ ಸಮರ ಗೆಲ್ಲೋಕೆ ಮೈತ್ರಿ ನಾಯಕರು ರಣತಂತ್ರ ಹೂಡುತ್ತಿದ್ದಾರೆ. ಹೊಸತೊಡಕು ನೆಪದಲ್ಲಿ ಬುಧವಾರ ಮೈತ್ರಿ ಒಕ್ಕಲಿಗ ನಾಯಕರು ತಂತ್ರ ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಹೆಚ್‍ಡಿ ಕುಮಾರಸ್ವಾಮಿ   ಅವರ ಬಿಡದಿ ತೋಟದ ಮನೆಯಲ್ಲಿ ಒಕ್ಕಲಿಗ ನಾಯಕರ ಸಭೆ ನಡೆಸಲು ಪ್ಲಾನ್‌ ಮಾಡಿದ್ರು. ಇದೀಗ ಬಿಡದಿ ತೋಟದ ಮನೆಯಲ್ಲಿ  ಏರ್ಪಡಿಸಿದ್ದ ಔತಣಕೂಟವನ್ನು ರದ್ದು ಮಾಡಲಾಗಿದೆ.

ಇದನ್ನೂ ಓದಿ: ಮಕ್ಕಳ ಭವಿಷ್ಯಕ್ಕಾಗಿ ಒಂದಾದ HDK & ಸುಮಲತಾ – ಮಂಡ್ಯ ಗೆಲ್ಲಲು ‘ಕೈ’ ಪಡೆ ಮಹಾಗೇಮ್

ಹೆಚ್‍ಡಿಕೆ ಬಿಡದಿ ತೋಟದ ಮನೆಯಲ್ಲಿ ಔತಣಕೂಟದ ಜೊತೆಗೆ ಒಕ್ಕಲಿಗ ನಾಯಕರ ಸಭೆಯನ್ನು ಬುಧವಾರ ಕರೆಯಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ಚುನಾವಣಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.  ಊಟದ ವ್ಯವಸ್ಥೆ, ಚೇರ್, ಪೆಂಡಾಲ್ ಪರಿಶೀಲನೆ ನಡೆಸಿದರು. ಅಲ್ಲದೇ 50ಕ್ಕೂ ಹೆಚ್ಚು ಮಂದಿ ಸೇರಿದ್ರೆ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆಗುತ್ತೆ. ಕುಟುಂಬಸ್ಥರಿಗೆ ಮಾತ್ರ ಊಟದ ವ್ಯವಸ್ಥೆ ಮಾಡಬಹುದು. ಆದರೆ ರಾಜಕೀಯ ನಾಯಕರು, ಮುಖಂಡರು ಬರುವ ಹಾಗಿಲ್ಲ. ಒಂದು ವೇಳೆ ರಾಜಕೀಯ ಮುಖಂಡರು ಬಂದ್ರೆ ಎಲ್ಲವನ್ನೂ ಸೀಜ್ ಮಾಡಿ ಕೇಸ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸದ್ಯ ಒಳಗೆ ಯಾವುದೇ ರಾಜಕೀಯ ಮುಖಂಡರು, ನಾಯಕರು ಇಲ್ಲ. ಒಂದು ಎಂಸಿಸಿ ಟೀಂ ಇಲ್ಲೇ ಇದ್ದು ಎಲ್ಲವನ್ನೂ ಪರಿಶೀಲನೆ ನಡೆಸಲಿದೆ. ನೀತಿ ಸಂಹಿತೆ ಉಲ್ಲಂಘನೆ ಆದ್ರೆ ಕಾನೂನು ರೀತಿಯ ಕ್ರಮವಹಿಸುತ್ತೇವೆ ಎಂದು ಸಹಾಯಕ ಚುನಾವಣಾ ಅಧಿಕಾರಿ ರಮೇಶ್ ಹೇಳಿದ್ದಾರೆ. ಜೊತೆಗೆ 50ಕ್ಕಿಂತ ಹೆಚ್ಚುವರಿ ಚೇರ್ ಶಾಮಿಯಾನವನ್ನು ಅಧಿಕಾರಿಗಳು ತೆರವು ಮಾಡಿಸಿದ್ದಾರೆ. ಸದ್ಯ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಸಭೆ ರದ್ದು ಮಾಡಿದ್ದಾರೆ.

Shwetha M