ಎಲೆಕ್ಷನ್ ದಿನ ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ – ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹೋಟೆಲ್‌ಗಳಲ್ಲಿ ರಿಯಾಯಿತಿ..!

ಎಲೆಕ್ಷನ್ ದಿನ ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ – ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹೋಟೆಲ್‌ಗಳಲ್ಲಿ ರಿಯಾಯಿತಿ..!

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಎರಡು ದಿನ ಬಾಕಿಯಿದೆ. ಅದರಂತೆ ಮೇ.10ರಂದು ನಡೆಯುವ ಮತದಾನಕ್ಕೆ ಬಿಎಂಆರ್‌ಸಿಎಲ್ ಮೆಟ್ರೋ ರೈಲು ಸಂಚಾರದ ಅವಧಿಯನ್ನ ವಿಸ್ತರಣೆ ಮಾಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸೇವೆಗಳನ್ನ ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ:  ‘ಹೆಚ್​ ಡಿಕೆಗೆ ಸಹಾಯ ಮಾಡಿ ಆಯ್ತು.. ರೆಸ್ಟ್ ಮಾಡಲಿ’ – ಸಿಎಂ ಆಗಲು ನನಗೊಂದು ಅವಕಾಶ ಕೊಡಿ ಎಂದ ಡಿಕೆಶಿ!

ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ, ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ)ಯಿಂದ ಕೊನೆಯ ರೈಲು ಮೇ.11 ರ ರಾತ್ರಿ 12 ಗಂಟೆ 05 ನಿಮಿಷಕ್ಕೆ ಹೊರಡಲಿದೆ. ಇನ್ನು ನಾಡಪುಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಿಂದ ಕೊನೆಯ ರೈಲು ಮೇ.11 ರ ರಾತ್ರಿ 12 ಗಂಟೆ 35 ನಿಮಿಷಕ್ಕೆ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಅಂದರೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ, ಸಂಸ್ಥೆಯಿಂದ ಹೊರಡಲಿದೆ. ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ.

ಇನ್ನು ಮೇ.10 ರಂದು ಮತದಾನ ಮಾಡುವವರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಡೆಸುತ್ತಿರುವ ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿಯನ್ನ ಘೋಷಿಸಿವೆ. ಹೌದು ಈ ಕೊಡುಗೆಯನ್ನ ಮೇ 10 ರಂದು ರಾಜ್ಯಾದ್ಯಂತ ಪಡೆಯಬಹುದು. ಮತದಾನದ ದಿನದಂದು ಹೊರಹೋಗಲು ಮತ್ತು ಮತದಾನ ಮಾಡಲು ಜನರನ್ನು ಉತ್ತೇಜಿಸಲು ಇಲಾಖೆ ಇದನ್ನ ಪ್ರಕಟಿಸಿದೆ. ಈ ಕುರಿತು ಕೆಎಸ್ಟಿಡಿಸಿ ‘ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಉತ್ತೇಜಿಸುವ ಸಲುವಾಗಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಿಗಮದ ಒಡೆತನದ ‘ಮಯೂರ’ ಹೋಟೆಲ್ಗಳಲ್ಲಿ ತಂಗಲು 50% ವಿಶೇಷ ರಿಯಾಯಿತಿಯನ್ನು ನೀಡಲು ಘೋಷಿಸಿದೆ. ರಾಜ್ಯದಾದ್ಯಂತ ಮತದಾನ ಮಾಡುವ ಸಾರ್ವಜನಿಕರಿಗೆ, ಪ್ರವಾಸಿಗರಿಗೆ. ವಿಶೇಷ ರಿಯಾಯಿತಿಯನ್ನು ಪಡೆಯಲು ಬಯಸುವ ಸಾರ್ವಜನಿಕರು ಕಡ್ಡಾಯವಾಗಿ ಮತ ಚಲಾಯಿಸಿ ಮತ್ತು ಈ ಸೌಲಭ್ಯದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ. ಇನ್ನು ರಾಜ್ಯ ಸರ್ಕಾರ ನಡೆಸುವ ಮಯೂರ ಹೋಟೆಲ್‌ಗಳು ಕರ್ನಾಟಕದಾದ್ಯಂತ ಮತ್ತು ರಾಜ್ಯದ ಎಲ್ಲಾ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿವೆ.

suddiyaana