ಬೈಕ್‌ ಶೋರೂಂ ಅಗ್ನಿ ಅವಘಡ! – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ!

ಬೈಕ್‌ ಶೋರೂಂ ಅಗ್ನಿ ಅವಘಡ! – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ!

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುಮಾರು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿದೆ.

ಇದನ್ನೂ ಓದಿ: ಸ್ಲೀಪರ್ ಬಸ್‌ಗಳಲ್ಲಿ ಹೊಸ ರೂಲ್ಸ್! – ಇನ್ಮುಂದೆ ರಾಜ್ಯದಲ್ಲಿ ಈ ನಿಯಮ ಪಾಲನೆ ಕಡ್ಡಾಯ!

ಬೆಂಗಳೂರಿನ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ಈ ಘಟನೆ ನಡೆದಿದೆ. ಬುಧವಾರ  ರಾತ್ರಿ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆಯೇ ಶೋರೂಂ ಸಿಬ್ಬಂದಿ ಓಡಿ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಶೋರೂಂನಲ್ಲಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಕರಕಲಾಗಿವೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣವಾಗಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Shwetha M