ಬಜೆಟ್‌ನಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು – ರಾಜ್ಯದಲ್ಲಿ ಕೆಫೆ ಸಂಜೀವಿನಿ ಆರಂಭ
ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: 73 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ರೋಹಿತ್ ಶರ್ಮಾ – ಡೆಬ್ಯೂ ಪ್ಲೇಯರ್ ಸರ್ಫರಾಜ್ ಖಾನ್ ಅರ್ಧಶತಕ
ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ವೇಳೆ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚ ಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದ್ದಾರೆ.
ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿ ಕಿಯೋನಿಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆ. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.
ಏನಿದು ಕೆಫೆ ಸಂಜೀವಿನಿ?
“ಈ ಹಣಕಾಸು ವರ್ಷದಲ್ಲಿ ರಾಜ್ಯದೆಲ್ಲೆಡೆ ಸುಮಾರು 7.50 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಫೆ ಸಂಜೀವಿನಿಯನ್ನು ಆರಂಭಿಸಲಾಗುತ್ತದೆ. ಇದು ಸುಮಾರು 50 ಮಹಿಳೆಯರು ನಡೆಸುವಂತಹ ಕೆಫೆ ಆಗಿರಲಿದೆ. ಈ ಕ್ಯಾಂಟೀನ್‌ಗಳು ಗ್ರಾಮೀಣ ಪ್ರದೇಶದಲ್ಲಿ ಬೇಡಿಕೆ ಮತ್ತು ಪೂರೈಕೆ ನಡುವಿನ ಅಂತರವನ್ನು ಮತ್ತಷ್ಟು ಕಡಿಮೆ ಮಾಡಲಿದೆ. ಹಾಗೆಯೇ ಕೈಗೆಟುಕುವ ದರದಲ್ಲಿ ಆರೋಗ್ಯಕರ, ನೈರ್ಮಲ್ಯಯಯಕ್ತ ಸ್ಥಳೀಯ ಆಹಾರವನ್ನು ಈ ಕ್ಯಾಂಟೀನ್‌ನಲ್ಲಿ ಪೂರೈಸಲಾಗುತ್ತದೆ,” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.