ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಸ್ತ್ರಸಂಹಿತೆ ನೀತಿ ಜಾರಿ ಮಾಡಿ – ಅಭಿಯಾನಕ್ಕೆ ಪ್ರತಾಪ್ ಸಿಂಹ ಬೆಂಬಲ

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಸ್ತ್ರಸಂಹಿತೆ ನೀತಿ ಜಾರಿ ಮಾಡಿ – ಅಭಿಯಾನಕ್ಕೆ ಪ್ರತಾಪ್ ಸಿಂಹ ಬೆಂಬಲ

ಮೈಸೂರು: ರಾಜ್ಯದ ಪ್ರಸಿದ್ಧ ದೇಗುಲಗಳಲ್ಲಿ ಈಗ ವಸ್ತ್ರ ಸಂಹಿತೆ ವಿಚಾರ ಸದ್ದು ಮಾಡುತ್ತಿದೆ. ಕೆಲದಿನಗಳ ಹಿಂದಷ್ಟೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ನೀತಿ ಜಾರಿ ಮಾಡುವಂತೆ ಹಿಂದೂ ಪರ ಸಂಘಟನೆಗಳು ಮನವಿ ಮಾಡಿದ್ದವು. ಇದೀಗ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲೂ ಇಂಥಾದ್ದೊಂದು ಅಭಿಯಾನ ಶುರುವಾಗಿದೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತಾದಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸಾರ್ವಜನಿಕರು ಅಭಿಯಾನ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ:  ಡಿಸೆಂಬರ್ 29ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆ ಸಾಧ್ಯತೆ

ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತರು, ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಸಾರ್ವಜನಿಕರು ಅಭಿಯಾನ ಪ್ರಾರಂಭಿಸಿದ್ದಾರೆ. ಈ ಅಭಿಯಾನಕ್ಕೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ , ‘ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ನಿಗದಿ ಮಾಡುವ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೂ ತಂದಿದ್ದರು. ಕೆಲವು ವೇಳೆ ಬೆಟ್ಟಕ್ಕೆ ಬರುವವರು ಬೇರೆ ಬೇರೆ ವಸ್ತ್ರಗಳನ್ನು ಧರಿಸಿ ಬರುವುದನ್ನು ನೋಡಿದ್ದೇವೆ. ಕೇರಳದಲ್ಲಿ ಯಾವುದೇ ದೇವಸ್ಥಾನಕ್ಕೆ ಹೋದರೂ ಪುರುಷ ಹಾಗೂ ಮಹಿಳಾ ಭಕ್ತರಿಗೆ ನಿಗದಿತ ಡ್ರೆಸ್ ಕೊಡ್ ಕಡ್ಡಾಯಗೊಳಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ಹೊರಟಿರುವುದು ಒಳ್ಳೆಯ ಬೆಳವಣಿಗೆ. ದೇವಸ್ಥಾನಕ್ಕೆ ಹೋಗಬೇಕಾದರೆ ಶ್ರದ್ಧಾ ಭಕ್ತಿಯಿಂದ ಹೋಗಬೇಕಾಗುತ್ತದೆ. ಇದಕ್ಕೆ ನನ್ನ ಬೆಂಬಲವೂ ಇದೆ. ಬೆಟ್ಟಕ್ಕೆ ಬರುವ ಭಕ್ತರು ಸೂಕ್ತ ವಸ್ತ್ರ ಧರಿಸಿ ಬರಬೇಕು’ ಎಂದು ಮನವಿ ಮಾಡಿದ್ದಾರೆ.

suddiyaana