ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅರೆಸ್ಟ್‌ – ಜೈಲಿನಿಂದಲೇ ಅಧಿಕಾರ ನಡೆಸಲು ನಿರ್ಧಾರ!

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅರೆಸ್ಟ್‌ – ಜೈಲಿನಿಂದಲೇ ಅಧಿಕಾರ ನಡೆಸಲು ನಿರ್ಧಾರ!

ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ  ಅರವಿಂದ್ ಕೇಜ್ರಿವಾಲ್  ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ. ಬಂಧನಕ್ಕೆ ಒಳಗಾಗಿರುವ ಅರವಿಂದ ಕೇಜ್ರಿವಾಲ್‌ ಅವರು ಜೈಲಿನಲ್ಲೇ ಕುಳಿತು ಅಧಿಕಾರ ನಡೆಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ – ಸಚಿವರ ಮಕ್ಕಳಿಗೆ ಮಣೆ

ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಹಲವು ಸಲ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ರಕ್ಷಣೆ ನೀಡಲು ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಬಂಧಿಸಿದ್ದಾರೆ.

ಇದೀಗ ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದೇ ಇರಲು ನಿರ್ಧರಿಸಿದ್ದಾರೆ. ವರದಿಗಳ ಪ್ರಕಾರ ಜೈಲಿನಲ್ಲೇ ಕುಳಿತು ಅಧಿಕಾರ ನಡೆಸಲು ದೆಹಲಿ ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಮಾಹಿತಿಗಳ ಪ್ರಕಾರ, ಆಮ್​​ ಆದ್ಮಿ ಪಕ್ಷದ ನಾಯಕರಿಗೆ ಕೇಜ್ರಿವಾಲ್ ಬಂಧನದ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು. ಅದಕ್ಕಾಗಿ ಮುಂದಿನ ಹೋರಾಟ, ರೂಪುರೇಷೆ ಹಾಗೂ ಸರ್ಕಾರ ನಡೆಸೋದು ಹೇಗೆ ಅನ್ನೋದ್ರ ಬಗ್ಗೆ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ.

ಈ ಬಗ್ಗೆ ದೆಹಲಿ ಜನರಿಂದ ಆಮ್​​ ಆದ್ಮಿ ಪಕ್ಷ ಅಭಿಪ್ರಾಯ ಕೂಡ ಸಂಗ್ರಹಿಸಿದೆ. ಆ ಮೂಲಕ ಜೈಲಿನಲ್ಲೇ ಕುಳಿತು ಸರ್ಕಾರ ನಡೆಸಲು ತೀರ್ಮಾನ ಆಗಿದೆ. ಜೈಲಿಗೆ ಹೋದರೆ ಸಿಎಂ ರಾಜಿನಾಮೆ ಕೊಡುವ ಅವಶ್ಯಕತೆ ಕಾನೂನಿನಲ್ಲಿ ಇಲ್ಲ ಎಂದು ಸಚಿವೆ ಆತಿಶಿ ಮರ್ಲೇನಾ ಹೇಳಿದ್ದಾರೆ. ಅವರ ಹೇಳಿಕೆಯಿಂದ ಕೇಜ್ರಿವಾಲ್ ಜೈಲಿನಲ್ಲೇ ಕುಳಿತು ಸರ್ಕಾರ ನಡೆಸೋದು ಖಚಿತವಾಗಿದೆ.

Shwetha M