ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ಎಂಟ್ರಿಕೊಟ್ಟ ಇಂಗ್ಲೆಂಡ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ಎಂಟ್ರಿಕೊಟ್ಟ ಇಂಗ್ಲೆಂಡ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡ ಸೆಮಿಫೈನಲ್‌ಗೇರಿದೆ.  22ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಂಗ್ಲರ ಪಡೆ ಸೆಮಿಫೈನಲ್​ಗೇರಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಡ್ಯಾನಿ ವ್ಯಾಟ್-ಹಾಡ್ಜ್ 42 ಎಸೆತಗಳಲ್ಲಿ 8 ಫೋರ್​ಗಳೊಂದಿಗೆ 65 ರನ್ ಬಾರಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಅಲಿಸ್ ಕ್ಯಾಪ್ಸಿ 28 ರನ್​ಗಳ ಕೊಡುಗೆ ನೀಡಿದರೆ, ಅಂತಿಮ ಓವರ್​ಗಳಲ್ಲಿ ಅಬ್ಬರಿಸಿದ ಹೀದರ್ ನೈಟ್ 26 ಎಸೆತಗಳಲ್ಲಿ 7 ಫೋರ್​ಗಳೊಂದಿಗೆ 43 ರನ್​ ಸಿಡಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 186 ರನ್​ ಕಲೆಹಾಕಿತು.

ಇದನ್ನೂ ಓದಿ: ಪದೇ ಪದೆ ಬಿಕ್ಕಳಿಕೆ ಬರ್ತಿದ್ಯಾ? – ಬಿಕ್ಕಳಿಕೆ ನಿಲ್ಲಲು ಏನು ಮಾಡ್ಬೇಕು?

187 ರನ್​ಗಳ ಕಠಿಣ ಗುರಿ ಪಡೆದ ವೆಸ್ಟ್ ಇಂಡೀಸ್​ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 69 ರನ್​ಗಳಿಸುವಷ್ಟರಲ್ಲಿ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಕಣಕ್ಕಿಳಿದ ಶಿನೆಲ್ಲೆ ಹೆನ್ರಿ 30 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 51 ರನ್ ಬಾರಿಸಿದರು. ಇದಾಗ್ಯೂ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 148 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಇಂಗ್ಲೆಂಡ್ ತಂಡವು 38 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಗ್ರೂಪ್-ಬಿ ಯಿಂದ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇತ್ತ ಸೋತಿರುವ ವೆಸ್ಟ್ ಇಂಡೀಸ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಬೇಕಿದ್ದರೆ ಐರ್ಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕು. ಮತ್ತೊಂದೆಡೆ ಇಂಗ್ಲೆಂಡ್ ತಂಡದ ಗೆಲುವಿನೊಂದಿಗೆ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್​ನಿಂದ ಹೊರಬಿದ್ದಿದೆ. ಇನ್ನೂ ಗ್ರೂಪ್ A ನಲ್ಲಿ ಟೀಂ ಇಂಡಿಯಾ ಇದ್ದು, ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡು ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದೆ.

Kishor KV

Leave a Reply

Your email address will not be published. Required fields are marked *