ಇಂಗ್ಲೆಂಡ್ ವಿರುದ್ಧ ಕ್ಯಾಪ್ಟನ್ ಗಿಲ್ ದಾಖಲೆಯ ಶತಕ – ಮೊದಲ ದಿನ 310 ರನ್ ಗಳಿಸಿದ ಟೀಮ್ ಇಂಡಿಯಾ

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಶತಕ ಸಿಡಿಸಿದ್ದಾರೆ. ಬರ್ಮಿಂಗ್ಹ್ಯಾಮ್ ಟೆಸ್ಟ್ ಪಂದ್ಯದ ಮೊದಲ ದಿನದಂದು ಟೀಮ್ ಇಂಡಿಯಾ 310 ರನ್ ಗಳಿಸಿದೆ. ಜೊತೆಗೆ 5 ವಿಕೆಟ್ ಕಳೆದುಕೊಂಡಿದೆ. ನಾಯಕ ಶುಭ್ಮನ್ ಗಿಲ್ 114 ರನ್ ಗಳಿಸಿದರೆ, ರವೀಂದ್ರ ಜಡೇಜಾ 41 ರನ್ ಗಳಿಸಿ ಅಜೇಯರಾಗಿ ಉಳಿದುಕೊಂಡಿದ್ದಾರೆ.
ಇದನ್ನೂ ಓದಿ:2 ರನ್ ಗೆ ರಾಹುಲ್ ಕ್ಲೀನ್ ಬೌಲ್ಡ್ – 3 ಚೇಂಜಸ್ ಭಾರತಕ್ಕೆ ಪ್ಲಸ್ ಆಗುತ್ತಾ?
ಎರಡನೇ ಟೆಸ್ಟ್‌ನ ಪಂದ್ಯದ ಮೊದಲ ದಿನ, ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಕಣಕ್ಕಿಳಿದ ಟೀಮ್ ಇಂಡಿಯಾದ ಬ್ಯಾಟಿಂಗ್ ಆರಂಭ ಚೆನ್ನಾಗಿರಲಿಲ್ಲ. ಓಪನರ್ ಕೆಎಲ್ ರಾಹುಲ್ ಕೇವಲ 2 ರನ್ ಗಳಿಸಿ ಔಟಾದರು. ರಾಹುಲ್ ನಂತರ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದ ಕರುಣ್ ನಾಯರ್ ಕೂಡ ಕೇವಲ 31 ರನ್ ಗಳಿಸಿ ನಿರ್ಗಮಿಸಿದರು. ನಂತರ ಶುಭ್ಮನ್ ಗಿಲ್ ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದರು. 216 ಎಸೆತಗಳಲ್ಲಿ 114 ರನ್ ಗಳಿಸಿದ ಗಿಲ್ ಎರಡನೇ ದಿನವೂ ಬ್ಯಾಟಿಂಗ್ ನಡೆಸಲಿದ್ದಾರೆ.
ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್, ಮೊದಲ ದಿನದ ಕೊನೆಯ ಸೆಷನ್‌ನಲ್ಲಿ ತಮ್ಮ 7 ನೇ ಟೆಸ್ಟ್ ಶತಕವನ್ನು ಪೂರೈಸಿದರು. ಶತಕ ಗಳಿಸುವುದರ ಜೊತೆಗೆ, ಗಿಲ್ ಅನೇಕ ದೊಡ್ಡ ದಾಖಲೆಗಳನ್ನು ಸಹ ಮಾಡಿದ್ದಾರೆ. ಮೊಹಮ್ಮದ್ ಅಜರುದ್ದೀನ್, ದಿಲೀಪ್ ವೆಂಗ್ಸಾಕರ್ ಮತ್ತು ರಾಹುಲ್ ದ್ರಾವಿಡ್ ನಂತರ, ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸತತ ಮೂರು ಶತಕಗಳನ್ನು ಬಾರಿಸಿದ ನಾಲ್ಕನೇ ಭಾರತೀಯ ಎಂಬ ಹೆಗ್ಗಳಿಕೆಗೆ ಶುಭ್ಮನ್ ಗಿಲ್ ಪಾತ್ರರಾಗಿದ್ದಾರೆ. ನಾಯಕನಾಗಿ ಮೊದಲ ಎರಡು ಟೆಸ್ಟ್‌ಗಳಲ್ಲಿ ಶತಕಗಳು ಈ ಸರಣಿಗೂ ಮುನ್ನ ಶುಭ್ಮನ್ ಗಿಲ್ ಭಾರತೀಯ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡರು. ನಾಯಕನಾಗಿ, ಅವರು ಸತತ ಎರಡನೇ ಪಂದ್ಯದಲ್ಲಿ ಶತಕ ಗಳಿಸಿದರು. ಅವರು ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ. ವಿಜಯ್ ಹಜಾರೆ ಮತ್ತು ಸುನಿಲ್ ಗವಾಸ್ಕರ್ ಜೊತೆಗೆ, ವಿರಾಟ್ ಕೊಹ್ಲಿ ಕೂಡ ನಾಯಕನಾಗಿ ಮೊದಲ ಎರಡು ಪಂದ್ಯಗಳಲ್ಲಿ ಶತಕ ಗಳಿಸಿದರು.

ನೋಡಿರಿ

