ಪ್ರಧಾನಿ ಮೋದಿ ಹೇಳುತ್ತಿರುವುದು ಸುಳ್ಳು.. ಚೀನಾ ಭಾರತದ ಭೂ ಪ್ರದೇಶವನ್ನು ಆಕ್ರಮಿಸಿಕೊಂಡಿದೆ – ರಾಹುಲ್‌ ಗಾಂಧಿ

ಪ್ರಧಾನಿ ಮೋದಿ ಹೇಳುತ್ತಿರುವುದು ಸುಳ್ಳು.. ಚೀನಾ ಭಾರತದ ಭೂ ಪ್ರದೇಶವನ್ನು ಆಕ್ರಮಿಸಿಕೊಂಡಿದೆ – ರಾಹುಲ್‌ ಗಾಂಧಿ

ಚೀನಾ ಭಾರತದ ಭೂಪ್ರದೇಶಗಳನ್ನು ಆಕ್ರಮಿಸುತ್ತಲೇ ಇದೆ. ಲಡಾಖ್‌ನಲ್ಲಿರುವ ಭಾರತದ ಭೂಪ್ರದೇಶದ ಮೇಲೆ ಚೀನಾ ಆಕ್ರಮಣ ಮಾಡುತ್ತಿರುವ ವಿಚಾರವನ್ನು ಕಾಂಗ್ರೆಸ್‌ ಸಂಸದ ಪುನರುಚ್ಚರಿಸಿದ್ದಾರೆ. ಪ್ರಧಾನಿ ಮೋದಿ ಅವರು ಒಂದು ಇಂಚು ಭೂಮಿಯನ್ನು ಆಕ್ರಮಿಸಿಲ್ಲ ಎಂದು ಹೇಳುತ್ತಾರೆ. ಅದು ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಧಾನಿ ಮೋದಿ ಅವರು, ಒಂದು ಇಂಚು ಭೂಮಿಯನ್ನು ಆಕ್ರಮಿಸಿಲ್ಲ ಎಂದು ಹೇಳುತ್ತಾರೆ. ಅದು ಸಂಪೂರ್ಣ ಸುಳ್ಳು. ಲಡಾಖ್’ಗೆ ನಾನು ಭೇಟಿ ನೀಡಿದ್ದೇನೆ. ಚೀನಾ ಭಾರತೀಯ ಭೂಮಿಯ ಮೇಲೆ ಒಳನುಗ್ಗಿರುವುದು ಸತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೆ ಖ್ಯಾತೆ ತೆಗೆದ ಚೀನಾ – ಅಕ್ಸಾಯ್‌ ಚಿನ್‌ ಪ್ರದೇಶದಲ್ಲಿ ಚೈನೀಸ್ ಬಂಕರ್‌, ಸುರಂಗ ಪತ್ತೆ!

ಇದೇ ವೇಳೆ ಚೀನಾ ತನ್ನ ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ಸೇರಿಸಿರುವ ಕುರಿತು ಪ್ರಶ್ನೆಗೆ ಉತ್ತರಿಸಿ, ನಕ್ಷೆಯ ಪ್ರಶ್ನೆ ಬಹಳ ಗಂಭೀರವಾದದ್ದು, ಆದರೆ, ಅವರು (ಚೀನಾ) ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಪ್ರಧಾನಿ ಕೂಡ ಈ ವಿಷಯದ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸಿದರು.

ಚೀನಾ ಸೋಮವಾರ ತನ್ನ “ಸ್ಟ್ಯಾಂಡರ್ಡ್ ಮ್ಯಾಪ್” ನ 2023 ಆವೃತ್ತಿ ಬಿಡುಗಡೆ ಮಾಡಿದೆ. ಈ ನಕ್ಷೆಯು ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಪ್ರದೇಶದ ಭಾಗವಾಗಿ ತೋರಿಸುತ್ತಿದೆ. ಈ ತಿಂಗಳ ಆರಂಭದಲ್ಲಿ, ಲಡಾಖ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

suddiyaana