ಏಪ್ರಿಲ್‌ 25, 26 ರಂದು ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ – ಕಾರಣವೇನು ಗೊತ್ತಾ?

ಏಪ್ರಿಲ್‌ 25, 26 ರಂದು ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ – ಕಾರಣವೇನು ಗೊತ್ತಾ?

ರಾಜ್ಯದಲ್ಲಿ ಲೋಕಸಭೆ ಚುನಾವಣಾ ಕಾವು ರಂಗೇರಿದೆ. ಕರ್ನಾಟಕದಲ್ಲಿ ಏ. 6 ಹಾಗೂ ಮೇ 7 ರಂದು  ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇದೀಗ ಮತದಾನ ಹೆಚ್ಚಿಸುವ ಉದ್ದೇಶದಿಂದ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಸೂರ್ಯ ಬಂಡಲ್ ಬ್ಯಾಂಕ್ಎ ಟಿಎಂ ಕಾರ್ಡ್‌ – ತೇಜಸ್ವಿ ಸೂರ್ಯ ಸೋಲಿಸಲು ಕೈ ಕಾರ್ಯಕರ್ತರಿಂದ ಹೊಸ ಅಸ್ತ್ರ!

ಏಪ್ರಿಲ್ 26 ಶುಕ್ರವಾರ ಬರುತ್ತದೆ. ಲೋಕಸಭೆ ಚುನಾವಣೆ ಪ್ರಯುಕ್ತ ಅಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಖಾಸಗಿ ಕಂಪನಿಗಳೂ ಸಹ ರಜೆ ನೀಡುವುದು ಕಡ್ಡಾಯ ಎಂದು ಚುನಾವಣಾ ಆಯೋಗ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೆ, ಮತದಾನದ ದಿನ ಶುಕ್ರವಾರ ಬರುತ್ತದೆ. ಮರುದಿನ ಶನಿವಾರ ಹಾಗೂ ಅದರ ಮರುದಿನ ಭಾನುವಾರ ಆದ್ದರಿಂದ ಸತತ ಮೂರು ದಿನ ರಜೆ ಎಂದು ಜನ ಪ್ರವಾಸಕ್ಕೆ ಯೋಜನೆ ಮಾಡಿದರೆ ಮತದಾನದ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಬಳ್ಳಾಪುರ ಡಿಸಿ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಿದ್ದಾರೆ.

ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ  ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. 25ರ ಸಂಜೆ 6ರಿಂದ 26ರ ರಾತ್ರಿ 8ರ ವರೆಗೂ ನಿರ್ಬಂಧ ಇರಲಿದೆ. ಈ ದಿನಗಳಲ್ಲಿ ನಂದಿ ಗಿರಿಧಾಮದಲ್ಲಿರುವ ಅತಿಥಿ ಗೃಹಗಳಿಗೂ ಬೀಗ ಹಾಕಲಾಗುವುದು ಎಂದು  ಆದೇಶ ಹೊರಡಿಸಲಾಗಿದೆ.

ಕೆಲವು ದಿನಗಳ ಹಿಂದಷ್ಟೇ ಏಪ್ರಿಲ್ 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್​​ಗೆ ಅವಕಾಶ ನೀಡದಂತೆ ಚಿಕ್ಕಮಗಳೂರು ಜಿಲ್ಲೆಯ ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಜನರು ಪ್ರವಾಸ ಬರುವುದನ್ನು ತಪ್ಪಿಸಲು ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿಯೇ ಈ ಕ್ರಮವನ್ನು ಕೈಗೊಳ್ಳಲಾಗಿದೆ.

Shwetha M