10 ದಿನಗಳ ಕಾಲ ಎಸ್ಕಾಂ ಆನ್‌ಲೈನ್ ಸೇವೆ ಬಂದ್! – ಕಾರಣವೇನು ಗೊತ್ತಾ?

10 ದಿನಗಳ ಕಾಲ ಎಸ್ಕಾಂ ಆನ್‌ಲೈನ್ ಸೇವೆ ಬಂದ್! – ಕಾರಣವೇನು ಗೊತ್ತಾ?

ಭಾನುವಾರದಿಂದ ಬರೋಬ್ಬರಿ 10 ದಿನಗಳ ಕಾಲ ಎಲ್ಲಾ ಎಸ್ಕಾಂ ಆನ್​ಲೈನ್​ ಸೇವೆಗಳು ಬಂದ್ ಆಗಲಿವೆ. ತಂತ್ರಾಂಶ ಉನ್ನತೀಕರಣ ಹಿನ್ನೆಲೆಯಲ್ಲಿ ಇಂಧನ ಇಲಾಖೆಯ ವ್ಯಾಪ್ತಿಯ ಎಲ್ಲ‌ ಎಸ್ಕಾಂಗಳಲ್ಲಿ ಆನ್ ಲೈನ್ ಸೇವೆ ಅಲಭ್ಯವಾಗಲಿವೆ ಎಂದು ವರದಿಯಾಗಿದೆ.

ಈ ಬಗ್ಗೆ ಇಂಧನ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಸಾಫ್ಟ್​​ವೇರ್​ ಅಪ್ಡೇಟ್​ ಹಿನ್ನೆಲೆ ಎಸ್ಕಾಂಗಳಲ್ಲಿ ಮಾರ್ಚ್ 10 ರಿಂದ 19 ರವರೆಗೆ‌ ಎಲ್ಲ ಅನ್​​ಲೈನ್​ ಸೇವೆಗಳು ಸ್ಥಗಿತಗೊಳ್ಳಲಿದೆ . ಬೆಸ್ಕಾಂ, ಜೆಸ್ಕಾಂ, ಸೆಸ್ಕ್, ಮೆಸ್ಕಾಂ, ಹೆಸ್ಕಾಂನಲ್ಲಿ ಆನ್​ಲೈನ್ ಸೇವೆಗಳು ಸಿಗುವುದಿಲ್ಲ ಭಾನುವಾರದಿಂದ ಸಿಗುವುದಿಲ್ಲ ಅಂತಾ ತಿಳಿಸಿದೆ.

ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಾಯ್ತು ನೀರಿನ ಸಮಸ್ಯೆ –  ಶೌಚ ಮಾಡಲು ಮಾಲ್‌ಗೆ ಹೋಗ್ತಿದ್ದಾರೆ ಜನ!

ರಾಜ್ಯದ ಎಲ್ಲ ಎಸ್ಕಾಂಗಳ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಕೆ ಸೇರಿ ಯಾವ ಆನ್​ಲೈನ್ ಸೇವೆಗಳು ಲಭ್ಯವಿರೋದಿಲ್ಲ. ಆದರೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಮಾಡಲ್ಲ. ನಿರಂತರವಾಗಿ ವಿದ್ಯುತ್ ನೀಡಲಾಗುತ್ತದೆ. ಸಾಫ್ಟ್ ವೇರ್ ಅಪ್​ಗ್ರೇಡ್ ಸಂದರ್ಭದಲ್ಲಿ ವಿದ್ಯುತ್ ಪಾವತಿ ಮಾಡೋದಕ್ಕೆ ಕಷ್ಟ ಆಗಬಹುದು.

ಆದರೆ ಆ‌ ಸಂದರ್ಭ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದಿಲ್ಲ ಎಂದು ಇಂಧನ ಇಲಾಖೆ ಮಾಹಿತಿ ನೀಡಿದೆ. ಸರ್ವರ್ ಅಪ್ ಗ್ರೇಡ್ ಆರಂಭವಾದ ಬಳಿಕ ಸ್ಥಿರಗೊಳ್ಳಲು 15 ದಿನಗಳ ಕಾಲಾವಕಾಶ ಇರುತ್ತದೆ. ಹೀಗಾಗಿ ಈ ವೇಳೆ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಇದಕ್ಕೆ ಗ್ರಾಹಕರು ಸಹಕರಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.

Shwetha M