ಚಾಂಪಿಯನ್ಸ್ ಟ್ರೋಫಿಗೆ ಟೀಂ ಅನೌನ್ಸ್ – ಭಾರತ ದುಬೈ ನಲ್ಲಿ ಆಡಿದ್ರೂ ಪಾಕ್ ಗಿಲ್ವಾ ನೆಮ್ಮದಿ?

ಚಾಂಪಿಯನ್ಸ್ ಟ್ರೋಫಿಗೆ ಟೀಂ ಅನೌನ್ಸ್ – ಭಾರತ ದುಬೈ ನಲ್ಲಿ ಆಡಿದ್ರೂ ಪಾಕ್ ಗಿಲ್ವಾ ನೆಮ್ಮದಿ?

ಫೆಬ್ರವರಿ 18ರಿಂದ ಶುರುವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಪಾಲ್ಗೊಳ್ಳಲಿವೆ. ಪಾಕಿಸ್ತಾನ ಮತ್ತು ಯುಎಇ ಆತಿಥ್ಯ ವಹಿಸಲಿದ್ದು, ಟೀಂ ಇಂಡಿಯಾ ಪಂದ್ಯಗಳು ಯುಎಇಯಲ್ಲಿ ನಡೆಯಲಿವೆ. 8 ರಾಷ್ಟ್ರಗಳ ಪೈಕಿ ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಮ್ಮ ತಂಡಗಳನ್ನು ಘೋಷಿಸಿವೆ. ಅಸಲಿಗೆ ಈ ಟೂರ್ನಿಗೆ ಮೊದಲು ತಂಡವನ್ನು ಪ್ರಕಟಿಸಿದ್ದೇ ಇಸಿಬಿ. ಇಂಗ್ಲೆಂಡ್‌ ಕ್ರಿಕೆಟ್ ಮಂಡಳಿ ತಿಂಗಳ ಹಿಂದೆಯೇ ಜೋಸ್ ಬಟ್ಲರ್ ನಾಯಕತ್ವದಲ್ಲಿ ತನ್ನ ತಂಡವನ್ನು ಪ್ರಕಟಿಸಿತ್ತು. ಇದೀಗ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗಳು ಅನೌನ್ಸ್ ಮಾಡಿವೆ.

ಇದನ್ನೂ ಓದಿ  : ತೆಂಡೂಲ್ಕರ್ TO ಸೆಂಟ್ರಲ್ ಮಿನಿಸ್ಟರ್ -ಸುಶೀಲ ಮೀನಾಗೆ ಕೇಂದ್ರ ಸಚಿವರ ಅಭಯ

ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಆಸ್ಟ್ರೇಲಿಯಾ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರ ಈ ತಂಡವನ್ನು ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ತಂಡದಲ್ಲಿ ಅನುಭವಿ ಆಟಗಾರರ ದಂಡೇ ಇದ್ದು, ಇವರ ಜೊತೆ ಯುವ ಆಟಗಾರ ಆರೋನ್ ಹಾರ್ಡಿಗೂ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ತಂಡದಲ್ಲಿ ಯಾರೆಲ್ಲಾ ಇದ್ದಾರೆ ಅಂತಾ ನೋಡೋದಾದ್ರೆ ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರೋನ್ ಹಾರ್ಡಿ, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪಾ ಸೆಲೆಕ್ಟ್ ಆಗಿದ್ದಾರೆ.

ಇಂಗ್ಲೆಂಡ್ ಕೂಡ 15 ಸದಸ್ಯರ ತಂಡವನ್ನ ಪ್ರಕಟ ಮಾಡಿದ್ದು, ಜೋಸ್ ಬಟ್ಲರ್ ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಯುವ ಆಟಗಾರನಾಗಿ ಜೇಕಬ್‌ ಬೆಥೆಲ್‌ ಕಾಣಿಸಿಕೊಂಡರೆ, ಅನುಭವಿ ದಾಂಡಿಗನಾಗಿ ಜೋ ರೂಟ್ ಸ್ಥಾನ ಪಡೆದಿದ್ದಾರೆ. ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್ ಸ್ಥಾನ ಪಡೆದಿದ್ದಾರೆ.

ನ್ಯೂಜಿಲೆಂಡ್ ಕೂಡ ಚಾಂಪಿಯನ್ಸ್ ಟ್ರೋಫಿಗೆ ಈಗಾಗ್ಲೇ ಟೀಂ ಅನೌನ್ಸ್ ಮಾಡಿದೆ  ಮಿಚೆಲ್ ಸ್ಯಾಂಟ್ನರ್ ನಾಯಕನಾಗಿ ಲೀಡ್ ಮಾಡಲಿದ್ದಾರೆ. ಹಾಗೇ ಡೆವೊನ್ ಕಾನ್ವೆ, ಟಾಮ್ ಲೇಥಮ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ವಿಲ್ ಯಂಗ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ನಾಥನ್ ಸ್ಮಿತ್, ಲಾಕಿ ಫರ್ಗುಸನ್, ಬೆನ್ ಸೀರ್ಸ್, ವಿಲಿಯಂ ಒರೋಕ್, ಮ್ಯಾಟ್ ಹೆನ್ರಿ, ಮೈಕೆಲ್ ಬ್ರೇಸ್​​ವೆಲ್ ಇದ್ದಾರೆ.

ಐಸಿಸಿ ಪ್ರತಿಷ್ಠಿತ ಟೂರ್ನಿಗೆ ಬಾಂಗ್ಲಾ ಕೂಡ ಟೀಂ ಅನೌನ್ಸ್ ಮಾಡಿದೆ. ಬಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಅನುಭವಿ ಆಲ್ ರೌಂಡರ್ ಶಕೀಲ್ ಅಲ್ ಹಸನ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ತಮ್ಮ ಬೌಲಿಂಗ್ ಶೈಲಿಯ ಎರಡನೇ ಪರೀಕ್ಷೆಯಲ್ಲೂ ಫೇಲ್ ಆಗಿದ್ದು, ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ. ನಜ್ಮುಲ್ ಹೊಸೈನ್ ಶಾಂತೂ ತಂಡವನ್ನ ಮುನ್ನಡೆಸಲಿದ್ದಾರೆ. ಹಾಗೇ ಮೆಹಿದಿ ಹಸನ್ ಮಿರಾಜ್, ಸೌಮ್ಯ ಸರ್ಕಾರ್, ತಂಝಿದ್ ಹಸನ್, ತಂಝಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಮಹ್ಮದುಲ್ಲಾ, ಜೇಕರ್ ಅಲಿ, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ಪರ್ವೇಜ್ ಹೊಸೈನ್, ನಸುಮ್ ಅಹ್ಮದ್, ತಂಜಿಮ್ ಹಸನ್ ಶಕೀಬ್, ನಹಿದ್ ರಾಣಾ ಸೆಲಕ್ಟ್ ಆಗಿದ್ದಾರೆ.

ಇನ್ನು ಅಫ್ಘಾನಿಸ್ತಾನ ಕೂಡ ತಂಡವನ್ನ ಬಿಡುಗಡೆ ಮಾಡಿದ್ದು, ಗಾಯದಿಂದ ಚೇತರಿಸಿಕೊಂಡಿರುವ ಇಬ್ರಾಹಿಂ ಜದ್ರಾನ್ ಕಮ್ ಬ್ಯಾಕ್ ಮಾಡಿದ್ದಾರೆ. ಹಾಗೇ ಸ್ಪಿನ್ನರ್ ಮುಜೀಬ್ ಉರ್ ರಹಿಮಾನ್ ಅವ್ರನ್ನ ತಂಡದಿಂದ ಕೈ ಬಿಡಲಾಗಿದೆ. ಇನ್ನು ಯಾರೆಲ್ಲಾ ಆಯ್ಕೆಯಾಗಿದ್ದಾರೆ ಅನ್ನೋದನ್ನ ನೋಡೋದಾದ್ರೆ ಕ್ಯಾಒ್ಟನ್ ಹಶ್ಮತುಲ್ಲಾ ಶಾಹಿದಿ, ರಹಮತ್ ಶಾ, ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಇಬ್ರಾಹಿಂ ಜದ್ರಾನ್, ಸೇದಿಕುಲ್ಲಾ ಅಟಲ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ರಶೀದ್ ಖಾನ್, ಎಎಮ್ ಗಜನ್ಫರ್, ನೂರ್ ಅಹ್ಮದ್, ಫಜಲ್ ಹಕ್ ಫಾರೂಕಿ, ನವೀದ್ ಜದ್ರಾನ್ ಮತ್ತು ಫರೀದ್ ಅಹ್ಮದ್ ಮಲಿಕ್ ಸ್ಥಾನ  ಗಿಟ್ಟಿಸಿಕೊಂಡಿದ್ದಾರೆ.

 

Shantha Kumari

Leave a Reply

Your email address will not be published. Required fields are marked *