ಕಾರಿನಲ್ಲೇ ಸುಟ್ಟು ಕರಕಲಾದ ಮಾಜಿ ಶಾಸಕರ ಮಗ- ಪಕ್ಕಾ ಪ್ಲ್ಯಾನ್ ಮಾಡಿ ಕೊ*ಲೆ ಮಾಡಿದ್ರಾ??

ಧಾರವಾಡ ಜಿಲ್ಲೆಯ ರಾಮಾಪುರ ಗ್ರಾಮದ ಸಮೀಪದ ನಿರ್ಜನ ಪ್ರದೇಶದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕರಾದ ಬಾಬುರಾವ್ ಬೋಳಶೆಟ್ಟಿ ಪುತ್ರ ಕಾರಿನಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೊಲೆ ಎಂದು ಶಂಕಿಸಲಾಗಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ.
ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹಚ್ಚಲಾಗಿದ್ದು, ಒಳಗಿದ್ದ ರಾಜು ಬೋಳಶೆಟ್ಟಿ ಅವರ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. ಗುರುತು ಸಿಗದಷ್ಟು ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ವಾರಾಣಸಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಭೀಕರ ದುರಂತದಲ್ಲಿ ಅಣ್ಣ , ತಂಗಿ ಬಲಿ
ದುಷ್ಕರ್ಮಿಗಳು ರಾಜು ಬೋಳಶೆಟ್ಟಿ ಅವರನ್ನು ಮೊದಲು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ನಿರ್ಜನ ಪ್ರದೇಶಕ್ಕೆ ತಂದು ಅವರದೇ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಕಾರು ಮತ್ತು ದೇಹ ಎರಡೂ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯಲಾಗದ ಸ್ಥಿತಿಯಲ್ಲಿವೆ.
ಘಟನಾ ಸ್ಥಳಕ್ಕೆ ಧಾರವಾಡ ಎಸ್‌ಪಿ ಗುಂಜನ್ ಆರ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಂಡ ಹಾಗೂ ಶ್ವಾನದಳ ಕೂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹಿಸಿವೆ. ಪ್ರಸ್ತುತ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಂತಕರ ಪತ್ತೆಗಾಗಿ ತೀವ್ರ ತನಿಖೆ ಆರಂಭಿಸಿದ್ದಾರೆ. ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದ ವ್ಯಕ್ತಿಯ ಈ ನಿಗೂಢ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ನೋಡಿರಿ

