ಯತೀಂದ್ರ ವರ್ಗಾವಣೆ ಸಚಿವ.. ಮೈಸೂರು ಪೊಲೀಸರಿಗೆ ಸಿಎಂ ಪುತ್ರನ ಕಾಟ! – ಪ್ರತಾಪ್ ಸಿಂಹ ಗಂಭೀರ ಆರೋಪ

ರಾಜ್ಯ ರಾಜಕೀಯ ನಾಯಕರ ನಡುವಿನ ವಾಕ್ಸಮರ ಜೋರಾಗಿದೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ಧರಾಮಯ್ಯ ಅವರ ಪುತ್ರನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಪೊಲೀಸರಿಗೆ ಎಂಎಲ್ ಸಿ ಯತೀಂದ್ರ ಸಿದ್ಧರಾಮಯ್ಯ ಅವರ ಕಾಟ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಮಾತು ಬಿಟ್ಟ ನಾಗ ಚೈತನ್ಯ ಮತ್ತು ಶೋಭಿತಾ – ದಂಪತಿ ಮಧ್ಯೆ ಬಂದಿದ್ಯಾಕೆ ಸಾಯಿ ಪಲ್ಲವಿ..!
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರತಾಪ್ ಸಿಂಹ, ಮೈಸೂರು ಪೊಲೀಸರಿಗೆ ಸಿಎಂ ಮಗನ ಕಾಟ ಹೆಚ್ಚಾಗಿದೆ. ಡಾ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ. ಯಾವುದೇ ವರ್ಗಾವಣೆ ಆಗಬೇಕಾದರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು. ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ಆರೋಪಿ ಯಾವ ಜಾತಿಯವನು ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಅವ್ಯಾಹತವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಅದರ ಮೇಲೆ ದಾಳಿ ಮಾಡಲೂ ಪೊಲೀಸರು ಹೆದರುತ್ತಿದ್ದಾರೆ. ದಾಳಿ ಮಾಡಿದರೆ ಎಲ್ಲಿ ಯಾವ ಸಚಿವ, ಶಾಸಕನ ಫೋನ್ ಬರುತ್ತದೆಯೋ ಎಂಬ ಭಯದಲ್ಲಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಖಾಲಿಯಾದರೆ ತನಗೆ ಸಿಗುತ್ತೆಂಬ ಆಸೆಯಲ್ಲಿ ಗೃಹ ಸಚಿವರು ತಮ್ಮ ಇಲಾಖೆಯನ್ನೇ ಮರೆತಿದ್ದಾರೆ. ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ. ಶಾಸಕರಿಗೆ ವಸೂಲಿ ನಿಲ್ಲಿಸಲು ಹೇಳಿ ಎಂದು ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ.
ಇನ್ನು ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಉಕ್ರೇನ್-ರಷ್ಯಾ ಯುದ್ಧದ ಬಗ್ಗೆ ಕಾಮೆಂಟ್ ಮಾಡುವ, ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಯಾರೊಬ್ಬರೂ ಬಾಲಕಿ ಕೊಲೆ ವಿಚಾರವಾಗಿ ಮಾತನಾಡುತ್ತಿಲ್ಲ. ಪ್ರಿಯಾಂಕ್, ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರಾ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಏಕೆ ಈ ಬಗ್ಗೆ ಮಾತಾಡ್ತಿಲ್ಲ? ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ.

ನೋಡಿರಿ

