ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! – ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಇದ್ರಿಂದಾಗಿ ತೈಲ ಕಂಪನಿಗಳ ಸಾಕಷ್ಟು ನಷ್ಟ ಅನುಭವಿಸುತ್ತಿವೆ. ಇದೀಗ ಭಾರತದ ಜನತೆಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದೆ. ಪೆಟ್ರೋಲ್ ಮೇಲಿನ ಸುಂಕ 13 ರೂ. ನಿಂದ 3 ರೂಪಾಯಿಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನ 10 ರೂ. ನಿಂದ ಶೂನ್ಯಕ್ಕೆ ಇಳಿಕೆ ಮಾಡಿದೆ.
ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್! – ಆರೆಂಜ್ ಮಾರ್ಗದ ಬಗ್ಗೆ ಬಿಗ್ ಅಪ್‌ಡೇಟ್!
ಇರಾನ್, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ದದ ಪರಿಣಾಮ ಭಾರತ ಮೇಲೆ ತಟ್ಟಿದೆ. ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನಿಂದ ಭಾರತೀಯ ತೈಲ ಕಂಪನಿಗಳು ಸಾಕಷ್ಟು ನಷ್ಟ ಅನುಭವಿಸುತ್ತಿವೆ. ಹಾರ್ಮುಜ್ ಬಿಕ್ಕಟ್ಟಿನಿಂದ ಪ್ರತಿ ಬ್ಯಾರಲ್ ಕಚ್ಚಾ ತೈಲ 100 ಡಾಲರ್‌ಗಳ ಗಡಿ ದಾಟಿದೆ. ಇದರಿಂದ ತೈಲ ಕಂಪನಿಗಳು ಪ್ರತಿ ಲೀಟರ್‌ಗೆ 48.8 ರೂ. ನಷ್ಟ ಅನುಭವಿಸುತ್ತಿವೆ. ಇದೀಗ ಕೇಂದ್ರ ಸರ್ಕಾರ ತೈಲ ಕಂಪನಿಗಳು ಎದುರಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದೆ. ಆದ್ರೆ ಇದರಿಂದ ಗ್ರಾಹಕರಿಗೆ ಯಾವುದೇ ಉಳಿತಾಯವಾಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇನ್ನು ಕೇಂದ್ರ ಸರ್ಕಾರವು ಈ ಹಿಂದೆ ಮೇ 2022 ರಲ್ಲಿ ಅಬಕಾರಿ ಸುಂಕವನ್ನ ಕಡಿತಗೊಳಿಸಿತ್ತು. ಇದರ ನಂತರ, ಪೆಟ್ರೋಲ್ ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್ (Diesel) ಪ್ರತಿ ಲೀಟರ್‌ಗೆ 6 ರೂ.ನಷ್ಟು ಅಗ್ಗವಾಗಿತ್ತು. ಆದ್ರೆ ಕೇಂದ್ರ ಸರ್ಕಾರದ ಇಂದಿನ ಕ್ರಮದಿಂದ ಗ್ರಾಹಕರಿಗೆ ಯಾವುದೇ ಲಾಭವಿಲ್ಲ ಎಂದು ಹೇಳಲಾಗ್ತಿದೆ.ನಿನ್ನಯಷ್ಟೇ ಭಾರತದ ಬಳಿ ಪ್ರಸ್ತುತ 60 ದಿನಗಳಿಗೆ ಆಗುವಷ್ಟು ತೈಲ ದಾಸ್ತಾನು ಮತ್ತು 30 ದಿನಗಳಿಗೆ ಆಗುವಷ್ಟು ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.
ಇನ್ನು ನಯಾರ ಎನರ್ಜಿ ಖಾಸಗಿ ಸಂಸ್ಥೆಯು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 5.3 ರೂ. ಮತ್ತು 3 ರೂ.ಗಳಷ್ಟು ಹೆಚ್ಚಿಸಿರುವುದು ಮಾರುಕಟ್ಟೆಯ ಮೇಲೆ ಮತ್ತಷ್ಟು ಪರಿಣಾಮ ಬೀರಿದೆ ಎನ್ನಲಾಗಿದೆ.

ನೋಡಿರಿ

