ರೇಷನ್‌ ಕಾರ್ಡ್‌ ತಿದ್ದುಪಡಿ ಅವಧಿ ಮತ್ತೆ ವಿಸ್ತರಣೆ – ಈ ಜಿಲ್ಲೆಗಳಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ!

ರೇಷನ್‌ ಕಾರ್ಡ್‌ ತಿದ್ದುಪಡಿ ಅವಧಿ ಮತ್ತೆ ವಿಸ್ತರಣೆ – ಈ ಜಿಲ್ಲೆಗಳಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ!

ಬೆಂಗಳೂರು: ರೇಷನ್‌ ಕಾರ್ಡ್‌ ತಿದ್ದುಪಡಿಗೆ ಜನರು ಪ್ರತಿದಿನ ಪರದಾಡುವಂತೆ ಆಗಿದೆ. ಸರ್ವರ್‌ ಸಮಸ್ಯೆಯಿಂದಾಗಿ ಪಡಿತರದಾರರಿಗಾಗಿ ತಿದ್ದುಪಡಿ ಮಾಡಿಕೊಳ್ಳಲು, ಹೆಸರು ನೋಂದಣಿ ಮಾಡಿಕೊಳ್ಳಲು ಅಡೆತಡೆ ಉಂಟಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಸರ್ವರ್‌ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಹಾರ ಪೂರೈಕೆ ಮತ್ತು ನಾಗರೀಕ ಸರಬರಾಜು ಇಲಾಖೆ ರಾಜ್ಯದಲ್ಲಿ ರೇಷನ್‌ ಕಾರ್ಡ್‌ ತಿದ್ದುಪಡಿಗೆ ನೀಡಿದ್ದ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ.

ಆಹಾರ ಪೂರೈಕೆ ಮತ್ತು ನಾಗರೀಕ ಸರಬರಾಜು ಇಲಾಖೆಯು ಹಿಂದೆ ಅಕ್ಟೋಬರ್‌ 5 ರಿಂದ 13ರವರೆಗೂ ಮೂರು ಹಂತಗಳಲ್ಲಿ ರೇಷನ್‌ ಕಾರ್ಡ್‌ ದ್ದುಪಡಿಗೆ ಅವಕಾಶ ನೀಡಿತ್ತು. ತಿದ್ದುಪಡಿಗೆ ಸಾಕಷ್ಟು ಕಡೆಗಳಲ್ಲಿ ಸರ್ವರ್‌ ಸಮಸ್ಯೆ ಎದುರಾದ ಹಿನ್ನೆಲೆ ಆಹಾರ ಪೂರೈಕೆ ಮತ್ತು ನಾಗರೀಕ ಸರಬರಾಜು ಇಲಾಖೆಯು ಈ ಕ್ರಮ ಕೈಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ ನೀಡಿದ್ದು, ಸೋಮವಾರ ಈ ಬಗ್ಗೆ ಇಲಾಖೆಯು ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ನಿಂದ ₹1,000 ಕೋಟಿ ಕಲೆಕ್ಷನ್ – ಯಾವ ರಾಜ್ಯಕ್ಕೆ ಎಷ್ಟೆಷ್ಟು ಹಣ ಸಂಗ್ರಹ?

ಸಮಸ್ಯೆಯಾದ ಜಿಲ್ಲೆಗಳಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ

ರೇಷನ್‌ ಕಾರ್ಡ್‌ ತಿದ್ದುಪಡಿ ವಿಸ್ತರಣೆಯನ್ನು ಎಲ್ಲಾ ಜಿಲ್ಲೆಗಳಿಗೂ ಮಾಡಿಲ್ಲ. ಯಾವ ಯಾವ ಜಿಲ್ಲೆಗಳಲ್ಲಿ ತಿದ್ದುಪಡಿ ಸಂದರ್ಭದಲ್ಲಿ ಸರ್ವರ್‌ ಸಮಸ್ಯೆಯಾಗಿತ್ತೋ ಆಯಾ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದಪಡಿಗೆ ಹೆಚ್ಚಿನ ಸಮಯ‌ ನೀಡಿವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಸಮಯವನ್ನು ವಿಸ್ತರಿಸಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಯಾವ ಯಾವ ಜಿಲ್ಲೆಗಳಿಗೆ ತಿದ್ದುಪಡಿ ವಿಸ್ತರಣೆ?

ಅಕ್ಟೋಬರ್‌ 16, 17 ಮತ್ತು 18 ರಂದು ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ ಮಾಡಿಕೊಳ್ಳಬಹುದಾಗಿದೆ. ಅಕ್ಟೋಬರ್‌ 19,20, 21ರಂದು ದಾವಣಗೆರೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶವಿದೆ.

Shwetha M