ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ವಿಧಿವಶ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ವಿಧಿವಶ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ವಿಧಿವಶರಾಗಿದ್ದಾರೆ. ಹಲವು  ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ  ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಲೀಲಾವತಿ ಅವರ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಆದರೆ ಶುಕ್ರವಾರ ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ. 

ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು. ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.

Shwetha M