ಕೆಜಿಎಫ್ ಚಾಚಾ ಇನ್ನು ನೆನಪು ಮಾತ್ರ – ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕೆಜಿಎಫ್ ಚಾಚಾ ಇನ್ನು ನೆನಪು ಮಾತ್ರ  – ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕೆಜಿಎಫ್ ಚಾಚಾ ಹರೀಶ್ ರಾಯ್ ಇನ್ನು ನೆನಪು ಮಾತ್ರ. ಓಂ, ನಲ್ಲ ,ಕೆಜಿಎಫ್, ಕೆಜಿಎಫ್ 2 ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ಖಳನಟ ಹರೀಶ್ ರಾಯ್ ನವೆಂಬರ್ 06 ರಂದು ನಿಧನ ಹೊಂದಿದ್ದಾರೆ. ಇವರಿಗೆ 55 ವರ್ಷ ವಯಸ್ಸಾಗಿತ್ತು.

 ಇದನ್ನೂ ಓದಿ:ಸದ್ಯಕ್ಕೆ ತೆರೆಗೆ ಬರಲ್ಲ ಕಾಂತಾರ ಚಾಪ್ಟರ್‌ 3! – ಹೊಸ ಪ್ರಯೋಗಕ್ಕೆ ಮುಂದಾದ ರಿಷಬ್‌ ಶೆಟ್ಟಿ!

ಸ್ಯಾಂಡಲ್‌ವುಡ್ ನಲ್ಲಿ ಖಡಕ್ ಖಳನಟರಾಗಿ ಫೇಮಸ್ ಆಗಿರುವ ಹರೀಶ್ ರಾಯ್ ಇನ್ನಿಲ್ಲ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹರೀಶ್ ರಾಯ್ ನಿಧನರಾಗಿದ್ದಾರೆ. ನಟ ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ಮಂದಿ ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ನಟ ಯಶ್ ಸಹ ಈ ಹಿಂದೆಯೇ ತಮಗೆ ಸಹಾಯ ಮಾಡಿರುವುದಾಗಿ ಹರೀಶ್ ರಾಯ್ ಹೇಳಿಕೊಂಡಿದ್ದರು. ಹಲವಾರು ಸಿನಿಮಾ ಮಂದಿ ಹೋಗಿ ಹರೀಶ್ ರಾಯ್ ಅವರನ್ನು ಮಾತನಾಡಿಸಿ ತಾವು ಜೊತೆಗೆ ಇರುವುದಾಗಿ ಭರವಸೆ ನೀಡಿದ್ದರು. ಒಂದು ತಿಂಗಳಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಹರೀಶ್ ರಾಯ್ ನಿಧನ ಹೊಂದಿದ್ದಾರೆ.

ಕರಾವಳಿ ಮೂಲದವರಾದ ಹರೀಶ್ ರಾಯ್ ಅವರು 90ರ ದಶಕದ ಹಲವಾರು ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಅಸಲಿಗೆ ನಿಜ ಜೀವನದಲ್ಲಿಯೂ ಸಹ ಪ್ರಕರಣ ಒಂದರಲ್ಲಿ ಹರೀಶ್ ರಾಯ್ ಅವರು ಜೈಲು ಪಾಲಾಗಿದ್ದರು. ದರ್ಶನ್ ಜೈಲಿಗೆ ಹೋದ ಸಂದರ್ಭದಲ್ಲಿ ಹರೀಶ್ ರಾಯ್, ತಮ್ಮ ಜೈಲು ದಿನಗಳನ್ನು ನೆನಸಿಕೊಂಡು ಕಣ್ಣೀರು ಹಾಕಿದ್ದರು. ಹರೀಶ್ ರಾಯ್ ಅವರು ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಹರೀಶ್ ರಾಯ್ ಅವರು ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್​ವುಡ್​ನ ಟಾಪ್ ಸಿನಿಮಾ ಕೆಜಿಎಫ್​​ ಚಾಪ್ಟರ್ 1 ಹಾಗೂ ಕೆಜಿಎಫ್​​ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದಾರೆ.

Sulekha