ಇಂದು ಆ್ಯಂಕರ್ ಅನುಶ್ರೀ ಕಲ್ಯಾಣ – ಮದುವೆ ನೋಡಲು ಬಂದ ಫ್ಯಾನ್ಸ್‌ಗೆ ನೋ ಎಂಟ್ರಿ!

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ಬಹುಕಾಲದ ಗೆಳೆಯ ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಇನ್ನು ಕೆಲವೇ ಸಮಯದಲ್ಲಿ ಈ ಮದುವೆ ಅದ್ದೂರಿಯಾಗಿ ನೆರವೇರಲಿದೆ. ಇವರ ಮದುವೆ ನೋಡಲು ಫ್ಯಾನ್ಸ್ ಕೂಡ ಆಗಮಿಸಿದ್ದರು. ಆದ್ರೀಗ ಫ್ಯಾನ್ಸ್ ಗೆ ನಿರಾಸೆ ಆಗಿದೆ.
ಇದನ್ನೂ ಓದಿ: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸವಾರರಿಗೆ ಹೊಸ ರೂಲ್ಸ್! – ಇನ್ಮುಂದೆ ಭೂಮ್ ಬ್ಯಾರಿಯರ್ ವ್ಯವಸ್ಥೆ!
ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಂದು ಬೆಂಗಳೂರಿನ ಹೊರ ವಲಯದಲ್ಲಿ ಇರುವ ಕಗ್ಗಲಿಪುರದ ರೆಸಾರ್ಟ್ ಒಂದರಲ್ಲಿ ಅನುಶ್ರೀ ಮದುವೆ ನಡೆಯುತ್ತಿದೆ. ಈ ವಿಚಾರ ತಿಳಿದ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಆದರೆ, ಅಭಿಮಾನಿಗಳಿಗೆ ಒಳಗೆ ಎಂಟ್ರಿ ನೀಡಲಾಗುತ್ತಿಲ್ಲ. ಅನುಶ್ರೀ ವಿವಾಹಕ್ಕೆ ಆಮಂತ್ರಣ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಹೀಗಾಗಿ, ಅಭಿಮಾನಿಗಳನ್ನು ಆರಂಭದಲ್ಲೇ ತಡೆದು ಕಳುಹಿಸಲಾಗುತ್ತಿದೆ. ಇದರಿಂದ ಫ್ಯಾನ್ಸ್ ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಅವರು ಅಸಮಾಧಾನ ಹೊರಹಾಕುತ್ತಿದ್ದಾರೆ. ಅನುಶ್ರೀ ಹೆಸರು ಮಾಡೋಕೆ ಫ್ಯಾನ್ಸ್ ಕಾರಣ. ಇವತ್ತು ನಮನ್ನೆ ಮದುವೆ ಮನೆಗೆ ಬಿಟ್ಟಿಲ್ಲ ಎಂದು ಫ್ಯಾನ್ಸ್ ಬೇಸರ ಮಾಡಿಕೊಂಡು ಹೊರ ಹೋಗುತ್ತಿದ್ದಾರೆ.
ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅಭಿಮಾನಿಗಳನ್ನೂ ಒಳಗೆ ಬಿಟ್ಟರೆ ನೂಕು ನುಗ್ಗಲು ಆಗಿವ ಸಾಧ್ಯತೆ ಇರುತ್ತದೆ. ಹೀಗಾಗಿ, ಅನುಶ್ರೀ-ರೋಷನ್ ಆಮಂತ್ರಣ ಇರುವವರಿಗೆ ಮಾತ್ರ ಒಳಗೆ ಬಿಡಲು ಸೂಚನೆ ನೀಡಿದ್ದಾರೆ.

ನೋಡಿರಿ

