ಕರ್ನಾಟಕರ ರೈತರು ಪೊಲೀಸರ ವಶಕ್ಕೆ – ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ದೆಹಲಿಯಲ್ಲಿ ರೈತರು ದೆಹಲಿ ಚಲೋ ಚಳವಳಿ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ಕರ್ನಾಟಕದ ರೈತರು ತೆರಳುತ್ತಿದ್ದ ವೇಳೆ ಅವರನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಇದೀಗ ಸಿಎಂ ಸಿದ್ಧರಾಮಯ್ಯ ಅವರು ರೈತನ್ನು ಬಿಡುಗಡೆ ಮಾಡಬೇಕು ಎಂದು ಮಧ್ಯಪತ್ರದೇಶದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಸಂಸದೆ ಸುಮಲತಾ ಮಂಡ್ಯದಿಂದಲೇ ಸ್ಪರ್ಧಿಸ್ತಾರಾ..?- ಕಾಂಗ್ರೆಸ್ ಮಾಡಿಕೊಂಡಿರೋ ಮೆಗಾ ಪ್ಲ್ಯಾನ್ ಏನು..?
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯದ 70 ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ದೆಹಲಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಮಧ್ಯ ಪ್ರದೇಶದ ಭೋಪಾಲ್ನಲ್ಲಿ ಪೊಲೀಸರು ಸೋಮವಾರ (ಫೆ.12) ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಪತ್ರ ಬರೆದಿದ್ದಾರೆ.
ದೆಹಲಿಗೆ ಹೊರಟಿದ್ದ ಕರ್ನಾಟಕದ ರೈತರನ್ನು ವಶಕ್ಕೆ ಪಡೆದು ಪೊಲೀಸರು ವಾರಾಣಸಿಗೆ ಸ್ಥಳಾಂತರಿಸುತ್ತಿದ್ದಾರೆ. ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆ ಮಾಡಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.
ರೈತರು ನ್ಯಾಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು, ಅದು ಸಂವಿಧಾನಿಕ ಹಕ್ಕು. ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಧಿಸಿರುವುದು ದುರದೃಷ್ಟಕರ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ನಮ್ಮ ರೈತರನ್ನು ವಶಕ್ಕೆ ಪಡೆದು ನಾಲ್ಕು ದಿವಸವಾಗಿದೆ. ಹೀಗಾಗಿ ರೈತರನ್ನು ಸ್ಥಳಾಂತರಿಸದೆ ಕೂಡಲೆ ಬಿಡುಗಡೆಗೊಳಿಸುವಂತೆ ಪತ್ರದ ಮೂಲಕ ಹೇಳಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ರೈತರ ಯೋಗಕ್ಷೇಮ ವಿಚಾರಿಸಿದರು.