MSP, FRP ಹೆಚ್ಚಳಕ್ಕೆ ರೈತರ ಪಟ್ಟು! – ಹೆದ್ದಾರಿ ತಡೆದು ರಾಜ್ಯಾದ್ಯಂತ ಹೋರಾಟ!

MSP, FRP ಹೆಚ್ಚಳಕ್ಕೆ ರೈತರ ಪಟ್ಟು! –   ಹೆದ್ದಾರಿ ತಡೆದು ರಾಜ್ಯಾದ್ಯಂತ ಹೋರಾಟ!

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಬ್ಬಿನ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹಾಗೂ ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹೆಚ್ಚಳಕ್ಕೆ ಆಗ್ರಹಿಸಿ ರೈತರು ರಾಜ್ಯದ ವಿವಿಧ ಭಾಗಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಬ್ಬು ಬೆಳೆಯಲು ಬೀಜ, ಗೊಬ್ಬರ, ಕಾರ್ಮಿಕರ ಕೂಲಿ, ನೀರಾವರಿ ಮತ್ತು ಸಾಗಣೆ ವೆಚ್ಚ ನಿರಂತರವಾಗಿ ಹೆಚ್ಚಾಗುತ್ತಿದೆ. ಆದರೆ, ಇದಕ್ಕೆ ತಕ್ಕಂತೆ ಕಬ್ಬಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎಂಬುದು ರೈತರ ಪ್ರಮುಖ ಅಳವಡಿಕೆಯಾಗಿದೆ. ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಬೆಲೆ ನಿಗದಿಪಡಿಸಬೇಕು, ಕಬ್ಬು ಬೆಳೆಗಾರರಿಗೆ ಆರ್ಥಿಕ ನ್ಯಾಯ ಒದಗಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಸಿಎಂ, ಮಾಜಿ ಸಿಎಂಗೆ ಸ್ಟಿಂಗ್ ಶಾಕ್? – ಕೋರ್ಟ್ ಮೆಟ್ಟಿಲೇರಿದ ಸಿದ್ದರಾಮಯ್ಯ!

ಕೆಲವು ಕಡೆಗಳಲ್ಲಿ ರೈತರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದು, ಇದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳೊಂದಿಗೆ ಚ

ರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂಬುದು ಹೋರಾಟಗಾರರ ಆಗ್ರಹವಾಗಿದೆ.
ಇನ್ನು ಕಬ್ಬಿನ ಬೆಲೆ ಹೆಚ್ಚಳದ ಬೇಡಿಕೆ ಈಡೇರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ರೈತರು ನೀಡಿದ್ದಾರೆ ಎನ್ನಲಾಗಿದೆ.

ಕಬ್ಬು ಬೆಳೆಗಾರರ ಬೆಲೆ ಹೆಚ್ಚಳದ ಹೋರಾಟ ಈಗ ರಾಜ್ಯದ ಗಮನ ಸೆಳೆದಿದ್ದು, ಸರ್ಕಾರ ಈ ವಿಚಾರದಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ರೈತರ ಬೇಡಿಕೆಗಳಿಗೆ ಪರಿಹಾರ ಸಿಗುತ್ತದೆಯೇ ಎಂಬುದೇ ಈಗಿನ ಪ್ರಮುಖ ಪ್ರಶ್ನೆಯಾಗಿದೆ.

Kishor KV

Leave a Reply

Your email address will not be published. Required fields are marked *