ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ಅನ್ನದಾತರು – ಫೆ.21ರಂದು ದಿಲ್ಲಿಯತ್ತ ಪಾದಯಾತ್ರೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತ ಸಂಘಟನೆಗಳು ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಅನ್ನದಾತರ ಹೋರಾಟ ತಣ್ಣಗಾಯ್ತು ಅನ್ನೋ ಹೊತ್ತಲ್ಲೇ ಮತ್ತೆ ಹೋರಾಟದ ಕಿಚ್ಚು ಹೊತ್ತಿ ಉರಿಯುವ ಆತಂಕ ಮೂಡಿದೆ. 4ನೇ ಸುತ್ತಿನ ಮಾತುಕತೆ ವಿಫಲವಾಗಿದ್ದು,ಇದೀಗ ಮತ್ತೆ ದೆಹಲಿಯಲ್ಲಿ ಹೋರಾಟದ ಕಿಚ್ಚು ಹೊತ್ತಿಸಲು ಅನ್ನದಾತರು ಮಹೂರ್ತ ಫಿಕ್ಸ್ ಮಾಡಿದ್ದಾರೆ.
ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್! – ಸೋಶಿಯಲ್ ಮೀಡಿಯಾ ಮೂಲಕ ಹಣಕ್ಕೆ ಬೇಡಿಕೆ!
ಹೌದು, ಕನಿಷ್ಟ ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಸರಕಾರಿ ಸಂಸ್ಥೆಗಳು ಐದು ವರ್ಷಗಳ ಅವಧಿಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು ‘ದಿಲ್ಲಿ ಚಲೋ’ ಆಂದೋಲನದಲ್ಲಿ ಭಾಗವಹಿಸಿರುವ ರೈತ ಮುಖಂಡರು ಸೋಮವಾರ ತಿರಸ್ಕರಿಸಿದ್ದಾರೆ. ಹೀಗಾಗಿ ಮತ್ತೆ ಹೋರಾಟ ಮುಂದುವರೆಸಲು ರೈತರು ಮುಂದಾಗಿದ್ದಾರೆ. ಕೇಂದ್ರ ಸರ್ಕಾರದ ಆಫರ್ ತಿರಸ್ಕರಿಸಿದ ಅನ್ನದಾತರು ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಸಂಬಂಧಿತ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ರೈತರು ತಿರಸ್ಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ. 21 ರಂದು ದೆಹಲಿಯತ್ತ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ.
“ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಅಥವಾ ಬ್ಯಾರಿಕೇಡ್ಗಳನ್ನು ತೆಗೆದುಹಾಕಿ ಶಾಂತಿಯುತವಾಗಿ ಪ್ರತಿಭಟಿಸಲು ದೆಹಲಿಗೆ ಹೋಗಲು ಅವಕಾಶ ನೀಡುವಂತೆ ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದು ರೈತ ಮುಖಂಡ ಸರ್ವನ್ ಸಿಂಗ್ ಪಂಧೇರ್ ಹೇಳಿದ್ದಾರೆ.
“ನಾವು ಫೆಬ್ರವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಶಾಂತಿಯುತವಾಗಿ ದೆಹಲಿಗೆ ತೆರಳುತ್ತೇವೆ” ಎಂದು ಹೇಳಿದರು. ಭಾನುವಾರ ರಾತ್ರಿ ರೈತ ಮುಖಂಡರೊಂದಿಗಿನ ಮಾತುಕತೆಯ ನಂತರ ಮಾತನಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಮತ್ತು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಂತಹ ಸಹಕಾರಿ ಸಂಘಗಳು ಮುಂದಿನ 5 ವರ್ಷಗಳವರೆಗೆ ಬೆಳೆಯನ್ನು ಎಂಎಸ್ಪಿ ದರದಲ್ಲಿ ಖರೀದಿಸಲು ‘ತೊಗರಿ ಬೇಳೆ’, ‘ಉದ್ದಿನ ಬೇಳೆ’, ‘ಮಸೂರ್ ದಾಲ್’ ಅಥವಾ ಮೆಕ್ಕೆಜೋಳವನ್ನು ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತವೆ, “ಖರೀದಿಸಿದ ಪ್ರಮಾಣಕ್ಕೆ ಯಾವುದೇ ಮಿತಿ ಇರುವುದಿಲ್ಲ ಮತ್ತು ಇದಕ್ಕಾಗಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗುವುದು” ಎಂದು ಅವರು ಹೇಳಿದ್ದಾರೆ.