ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ
ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾಗೆ ಹುದ್ದೆ ಸಿಗುವ ಸಾಧ್ಯತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ರಾಜೀನಾಮೆ ನೀಡಿದ್ದಾರೆ. ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಹುದ್ದೆಗೆ ಏರುವ ನಿರೀಕ್ಷೆಯಿದೆ.

ಇದನ್ನೂ ಓದಿ:  ಶ್ರದ್ಧಾ ಹತ್ಯೆ ಪ್ರಕರಣ- ಅಫ್ತಾಬ್ ವಿರುದ್ಧ ಸಿಕ್ಕಿರುವ ಪ್ರಬಲ ಸಾಕ್ಷಿಗಳಾವುವು?

ಡಿಸೆಂಬರ್ 5ರಂದು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನಂತರ ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ.  ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆಕೆಎನ್​ಸಿ ನಾಯಕ, “ನನ್ನ ಆರೋಗ್ಯ ಸರಿಯಾಗಿಲ್ಲ. ಹೀಗಾಗಿ, ಇನ್ನು ಈ ಪಕ್ಷವನ್ನು ಮುನ್ನಡೆಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ತಂದೆ ಅಧಿಕಾರದಿಂದ ಕೆಳಗಿಳಿದ ನಂತರ ಹೊಸ ಮುಖ್ಯಸ್ಥರಾಗಬಹುದು ಅನ್ನೋ ಮಾತು ಕೇಳಿಬರ್ತಿದೆ.

ಚುನಾವಣೆ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಪಕ್ಷದ ಮುಖ್ಯ ವಕ್ತಾರ ತನ್ವಿರ್ ಸಾದಿಕ್ ಹೇಳಿದ್ದಾರೆ. ಹಜರತ್‌ಬಾಲ್‌ನಲ್ಲಿರುವ ಪಕ್ಷದ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ ಸಮಾಧಿಯ ಬಳಿ ಚುನಾವಣೆ ನಡೆಯಲಿದೆ ಎಂದು ಸಾದಿಕ್ ಹೇಳಿದ್ದಾರೆ.

suddiyaana