ವಾಹನ ಸವಾರರಿಗೆ ಮಹತ್ವದ ಸುದ್ದಿ – ಏ. 10 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ!

ವಾಹನ ಸವಾರರಿಗೆ ಮಹತ್ವದ ಸುದ್ದಿ – ಏ. 10 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ!

ವಾಹನ ಸವಾರರಿಗೆ ಮಹತ್ವದ ಸುದ್ದಿಯಿದೆ. ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಸಂಗ್ರಹ ನಿಯಮದಲ್ಲಿ ಬದಲಾವಣೆ ಆಗಲಿದೆ. ಇದೇ ಏಪ್ರಿಲ್ 10ರಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ.  ಇನ್ಮುಂದೆ ಹೆದ್ದಾರಿ ಟೋಲ್‌ ಪ್ಲಾಜಾಗಳಲ್ಲಿ ಶುಲ್ಕವನ್ನು ನಗದು ರೂಪದಲ್ಲಿ ಹಣ ಸ್ವೀಕರಿಸುವುದಿಲ್ಲ. ಬದಲಾಗಿ ಫ್ಯಾಸ್ಟ್‌ಟ್ಯಾಗ್ ಬಿಟ್ಟರೆ ಯುಪಿಐ ಮೂಲಕ ಮಾತ್ರವೇ ಪಾವತಿಸಬೇಕು ಎಂಬ ಹೊಸ ನಿಯಮ ಜಾರಿ ಆಗಲಿದೆ.

ಇದನ್ನೂ ಓದಿ: ಕೊಡಗಿನಲ್ಲಿ ವಿರೋಶ್‌ ಗ್ರ್ಯಾಂಡ್‌ ಪಾರ್ಟಿ! –  ಕೊಡವ ಸಂಪ್ರದಾಯದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ

ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಹಾಗಾಗಿ ಏಪ್ರಿಲ್‌ 10 ರಿಂದ ಜಾರಿಯಾಗುವಂತೆ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನ ನಿಲ್ಲಿಸಲಾಗುತ್ತಿದೆ. ಟೋಲ್ ಪ್ಲಾಜಾ ಹಾದು ಹೋಗಲು ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ, ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಅಂದರೆ, ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25 ರಷ್ಟು ಹೆಚ್ಚುವರಿ ಹಣವನ್ನ ಚಾಲಕರು ಪಾವತಿಸಬೇಕಾಗುತ್ತದೆ.

ಒಂದು ವೇಳೆ ಫಾಸ್ಟ್‌ಟ್ಯಾಗ್‌ ಮತ್ತು ಯುಪಿಐ ಎರಡೂ ಪಾವತಿ ವಿಧಾನಗಳನ್ನ ಚಾಲಕರು ನಿರಾಕರಿಸಿದ್ರೆ, ರಾಷ್ಟ್ರೀಯ ಹೆದ್ದಾರಿ ನಿಯಮಗಳಡಿ ವಾಹನ ಪ್ರವೇಶವನ್ನ ನಿರಾಕರಿಸಬಹುದು. ಅಥವಾ ಇ-ನೋಟಿಸ್‌ ನೀಡಬಹುದು. 3 ದಿನಗಳ ಒಳಗೆ ದಂಡದ ಮೊತ್ತ ಪಾವತಿಸದೇ ಇದ್ದರೆ ದಂಡದ ಮೊತ್ತ ದುಪ್ಪಟ್ಟಾಗಬಹುದು ಎಂದು ಸೂಚಿಸಲಾಗಿದೆ.  ಟೋಲ್‌ ಬೂತ್‌ಗಳಲ್ಲಿ ಕಾಯುವ ಸಮಯವನ್ನು ಕಡಿಮೆ ಮಾಡಲು ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಈ ನಿರ್ಧಾರಕ್ಕೆ ಮುಂದಾಗಿದೆ ಎನ್ನಲಾಗಿದೆ.

Shwetha M