‘ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ ನೋಡೋಣ’ – ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

‘ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ ನೋಡೋಣ’ – ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

ಅರಗ ಜ್ಞಾನೇಂದ್ರ ಸಮರ್ಥ ಗೃಹಸಚಿವ ಅಂತಾ ಸಾಬೀತು ಪಡಿಸಬೇಕು ಅಂದ್ರೆ ಅಶ್ವತ್ಥ ನಾರಾಯಣ್ ವಿರುದ್ಧ ಪ್ರಕರಣ ದಾಖಲಿಸಿ ಎಂದು ಸದನದಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಹೊಡಿ, ಬಡಿ ಅಂತಾ ಯಾವ ಧರ್ಮವೂ ಹೇಳಿಕೊಡಲ್ಲ. ಇಂತಹ ಹೇಳಿಕೆಗಳಿಗೆ ನಾನು ಬಗ್ಗುವವನಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಟಿಪ್ಪುನನ್ನು ಹೊಡೆದು ಹಾಕಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನೂ ಹೊಡೆದು ಹಾಕೋಣ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲು ಸಿದ್ಧವಾಗಿಲ್ಲ. ಆರಗ ಜ್ಞಾನೇಂದ್ರ ಅವರೇ ನಿಮ್ಮ ಇಲಾಖೆ ಸತ್ತು ಹೋಗಿದೆ. ನೀವು ಇಲಾಖೆ ಮುನ್ನಡೆಸಲು ಅಸಮರ್ಥರು ಎಂದರು ಗುಡುಗಿದರು.

ಇದನ್ನೂ ಓದಿ:  ‘ತಾಕತ್ತಿದ್ದರೆ ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ’- ಸದನದಲ್ಲಿ ಸಿದ್ದರಾಮಯ್ಯ ಸವಾಲ್

ಅಶ್ವತ್ಥ್ ನಾರಾಯಣ ಹೇಳಿಕೆ ಪ್ರಚೋದನಾಕಾರಿ ಹೌದೋ? ಅಲ್ವೋ? ಎಂದು ಸದನದಲ್ಲಿ ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ಆರಗ ಜ್ಞಾನೇಂದ್ರ ಅವರೇ ನೀವು ಒಳ್ಳೆಯವರು. ಆದರೆ, ಗೃಹ ಇಲಾಖೆ ನಿರ್ವಹಿಸಲು ಆರಗ ಜ್ಞಾನೇಂದ್ರ ಅಸಮರ್ಥರು ಎಂದರು. ಈ ವೇಳೆ ಎದ್ದು ನಿಂತು ಆಕ್ಷೇಪ ವ್ಯಕ್ತಪಡಿಸಿದ ಗೃಹಸಚಿವ ಆರಗ ಜ್ಞಾನೇಂದ್ರ, ಗೃಹ ಇಲಾಖೆ ನಿರ್ವಹಿಸಲು ನಾನು ಸಮರ್ಥನಿದ್ದೇನೆ. ನಿಮ್ಮ ಕಾಲಕ್ಕಿಂತ ಸಮರ್ಥವಾಗಿ ಇಲಾಖೆ ನಿರ್ವಹಣೆ ಮಾಡುತ್ತಿದ್ದೇನೆ ಎಂದರು. ತಾನು ಗೃಹ ಇಲಾಖೆ ಮುನ್ನಡೆಸಲು ಸಮರ್ಥ ಎಂದು ಹೇಳಿದ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಸಮರ್ಥರಾಗಿದ್ದರೆ ಅಶ್ವತ್ಥ್ ನಾರಾಯಣ ವಿರುದ್ಧ ಪ್ರಕರಣ ದಾಖಲಿಸಿ ಎಂದರು. ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರತಿಪಕ್ಷ ನಾಯಕ, ಧಮ್ ಇದ್ದರೆ, ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ ನೋಡೋಣ. ನಾನು ಎದುರಿಸಲು ಸಿದ್ಧನಿದ್ದೇನೆ ಎಂದರಲ್ಲದೆ, ಬಾಯಲ್ಲಿ ಹೇಳಿದ್ದಷ್ಟು ಸುಲಭ ಅಲ್ಲ ಎಂದರು.

suddiyaana