ಕುಂದಾಪುರದ ಕೆರಾಡಿಯಲ್ಲಿ ಫಿಲ್ಮ್ ಸಿಟಿ ನಿರ್ಮಾಣ – ಭವ್ಯ ಸೆಟ್ ನಿರ್ಮಿಸಿದ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ

ಸ್ಯಾಂಡಲ್‌ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕನಸು ನನಸಾಗಿದೆ. ರಿಷಭ್ ಶೆಟ್ಟಿ ತನ್ನ ಹುಟ್ಟೂರಲ್ಲಿ ಭವ್ಯವಾದ ಫಿಲ್ಮ್ ಸಿಟಿ ನಿರ್ಮಿಸಿದ್ದಾರೆ. ಸುಂದರ ಸೆಟ್‌ನಿಂದಾಗಿ ಕರಾವಳಿ ಭಾಗದಲ್ಲಿ ಚಿತ್ರೀಕರಣಕ್ಕೆ ಅನುಕೂಲವಾಗಿದೆ.
ಇದನ್ನೂ ಓದಿ:ಜೋಡಿ ನಂಬರ್-1 ಶೋನಲ್ಲಿ ಮಿಮಿಕ್ರಿ ಗೋಪಿ, ಸಿಂಗರ್ ಬಾಳು ಬೆಳಗುಂದಿ – ಜಗಪ್ಪ, ನಯನಾಗೂ ಸಿಕ್ತು ಚಾನ್ಸ್..!
ಕಾಂತಾರ ಸಿನಿಮಾ ಯಶಸ್ಸಿನ ನಂತರ ಕರಾವಳಿಯ ಸಂಸ್ಕೃತಿ ಮತ್ತು ಸೌಂದರ್ಯವನ್ನು ಇಡೀ ಜಗತ್ತು ಕೊಂಡಾಡಿತ್ತು. ಇದೀಗ ಮತ್ತೆ ಕರಾವಳಿಯತ್ತ ಸಿನಿಮಾ ಜಗತ್ತು ಕಾಲಿಡುವ ಸಮಯ ಬಂದಿದೆ. ಸ್ಯಾಂಡಲ್‌ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೆರಾಡಿಯಲ್ಲಿ ಭವ್ಯವಾದ ಫಿಲ್ಮ್ ಸಿಟಿ ನಿರ್ಮಾಣ ಮಾಡಿದ್ದಾರೆ. ಈ ಬಗ್ಗೆ ಸ್ವತಃ ರಿಷಭ್ ಶೆಟ್ಟಿ ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್ ಸಿಟಿಯಲ್ಲಿ ಸೆಟ್ ನಿರ್ಮಾಣ ಮಾಡಲಾಗುತ್ತದೆ. ಆದರೆ, ರಿಷಬ್ ಶೆಟ್ಟಿ ಅವರು ಕುಂದಾಪುರದ ಕೆರಾಡಿಯಲ್ಲೇ ‘ಕಾಂತಾರ 2’ ಚಿತ್ರದ ಸೆಟ್ ನಿರ್ಮಾಣ ಮಾಡಿದರು. ಈ ಸೆಟ್ ಅದ್ಭುತವಾಗಿತ್ತು. ಈಗ ಇದನ್ನು ಸಿನಿಮಾ ಸಿಟಿಯಾಗಿ ಬದಲಾಯಿಸಿರೋದಾಗಿ ರಿಷಭ್ ಶೆಟ್ಟಿ ಹೇಳಿದ್ದಾರೆ.
ಕಾಂತಾರದ ಬಳಿಕ ಕುಂದಾಪುರ, ಬೈಂದೂರು ಭಾಗ ಫಿಲ್ಮ್ ಸಿಟಿಯಾಗಿ ಬದಲಾಗಿದೆ. ಈ ಭಾಗದಲ್ಲಿ ಇನ್ನಷ್ಟು ಸಿನಿಮಾ ಶೂಟ್ ಆಗುವ ನಿರೀಕ್ಷೆ ಇದೆ. ಈ ಭಾಗದ ಜನರಿಗೆ ಸಿನಿಮಾದ ಮೇಲಿನ ಗೌರವ ಹೆಚ್ಚಾಗಿದೆ ಎಂದು ರಿಷಬ್ ಶೆಟ್ಟಿ ಅವರು ಹೇಳಿದ್ದಾರೆ. ಕುಂದಾಪುರ ಸೇರಿದಂತೆ ಕರಾವಳಿ ಭಾಗದಲ್ಲಿ ಅಪಾರ ಪ್ರಕೃತಿ ಸೌಂದರ್ಯವಿದೆ. ಇದನ್ನು ಕೆಲವು ಸಿನಿಮಾಗಳಲ್ಲಿ ಸೆರೆ ಹಿಡಿಯಲಾಗಿದೆ. ಆದರೆ, ಇದನ್ನು ಸಂಪೂರ್ಣವಾಗಿ ಬಳಸಿಕೊಂಡಿಲ್ಲ ಎಂಬುದು ರಿಷಬ್ ಶೆಟ್ಟಿ ಅವರ ಅಭಿಪ್ರಾಯ. ‘ಕಾಂತಾರ’ ಹಾಗೂ ‘ಕಾಂತಾರ: ಚಾಪ್ಟರ್ 1’ ಬಳಿಕ ಕರಾವಳಿಯ ಸಂಸ್ಕೃತಿ ಎಲ್ಲರಿಗೂ ತಿಳಿದಿದೆ ಎಂಬುದು ವಿಶೇಷ.

ನೋಡಿರಿ

