‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಮುಂದಿನ ವಾರ ರಿಲೀಸ್ – ರೂಪೇಶ್ ಶೆಟ್ಟಿಗೆ ಡಬಲ್ ಧಮಾಕಾ

‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಮುಂದಿನ ವಾರ ರಿಲೀಸ್ – ರೂಪೇಶ್ ಶೆಟ್ಟಿಗೆ ಡಬಲ್ ಧಮಾಕಾ

‘ಬಿಗ್ ಬಾಸ್ ಸೀಸನ್ 9’ ಶೋ ವಿನ್ನರ್ ರೂಪೇಶ್ ಶೆಟ್ಟಿಗೆ ಹೊಸವರ್ಷದಲ್ಲಿ ಡಬಲ್ ಧಮಾಕಾ. ರೂಪೇಶ್ ಶೆಟ್ಟಿ ಅಭಿನಯದ  ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಜನವರಿ 13ರಂದು ರಿಲೀಸ್ ಆಗಲಿದೆ. ಗಗನ್ ಎಂ. ನಿರ್ದೇಶನದ ‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರದಲ್ಲಿ ‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ಗೀತಾ ಭಾರತಿ ಭಟ್, ಪಂಚಮಿ ರಾವ್ ಕೂಡ ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ತುಳು ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿ, ಕಿರುಚಿತ್ರ ಹಾಗೂ ಡಾಕ್ಯುಮೆಂಟರಿಗಳನ್ನು ಮಾಡಿ ಅನುಭವ ಹೊಂದಿರುವ ಗಗನ್ , ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿ:  ಕೇಸರಿ ಬಿಕಿನಿ ಹಾಕಿದ ದೃಶ್ಯಕ್ಕೆ ಬಿತ್ತು ಕತ್ತರಿ -‘ಪಠಾಣ್’ ಸಿನಿಮಾದ ವಿವಾದಕ್ಕೆ ಬ್ರೇಕ್ ಹಾಕಿದ ಶಾರುಖ್

‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾದಲ್ಲಿ ಮಂಗಳೂರು ಕನ್ನಡ ಶೈಲಿಯಲ್ಲಿ ಡೈಲಾಗ್‌ಗಳಿವೆ. ಯಕ್ಷಗಾನದಲ್ಲಿ ಸಿಂಹದ ವೇಷ ಹಾಕುವ ಹುಡುಗನ ಜೀವನದಲ್ಲಿ ನಡೆಯುವ ಪ್ರೇಮಕಥೆಯೇ ಈ ಚಿತ್ರದ ಹೈಲೆಟ್ಸ್. ಇನ್ನು ಕನ್ನಡದಲ್ಲಿ ಹೀರೋ ಆಗಿ ನಟಿಸುತ್ತಿರುವ 5ನೇ ಸಿನಿಮಾವಿದು ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ. ‘ಡೇಂಜರ್ ಝೋನ್’, ‘ಅನುಷ್ಕಾ’, ‘ನಿಶಬ್ಧ 2’, ‘ಗೋವಿಂದ ಗೋವಿಂದ’ ಸಿನಿಮಾ ಮಾಡಿದ್ದೇನೆ. ಆಗೆಲ್ಲಾ ಆ ಚಿತ್ರದಲ್ಲಿ ನಾನಿದ್ದೇನೆ ಎಂದು ಹೇಳುತ್ತಿದ್ದೆ. ಆದ್ರೆ ಇದೇ ಮೊದಲ ಬಾರಿಗೆ ರೂಪೇಶ್ ಶೆಟ್ಟಿ ಸಿನಿಮಾ ಬರ್ತಿದೆ ಅಂತ ಎಲ್ಲರೂ ಹೇಳುತ್ತಿದ್ದಾರೆ. ಇದಕ್ಕೆಲ್ಲ ಬಿಗ್ ಬಾಸ್ ಕಾರಣ’ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ. ಕ್ಲಾಸಿಕಲ್ ಡಾನ್ಸರ್ ಆದ ಪಂಚಮಿ ರಾವ್ ಅವರಿಗೆ ಇದು ಮೊದಲ ಸಿನಿಮಾ. ನಟಿ ಗೀತಾ ಭಾರತಿ ಭಟ್ ಪಾಲಿಗೆ ಈ ಸಿನಿಮಾ ಸ್ಪೆಷಲ್ ಆಗಿದೆ.

suddiyaana