ಸೀಟ್ ಬೆಲ್ಟ್ ಧರಿಸಿಲ್ಲ ಎಂದು ಸ್ಕೂಟರ್ ಸವಾರನಿಗೆ ಫೈನ್!

ಸೀಟ್ ಬೆಲ್ಟ್ ಧರಿಸಿಲ್ಲ ಎಂದು ಸ್ಕೂಟರ್ ಸವಾರನಿಗೆ ಫೈನ್!

ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸದಿದ್ದರೇ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ ಚಲನ್ ಮನೆಗೆ ಬರುವುದು ಸಾಮಾನ್ಯ. ಇನ್ನು ಬೈಕ್ ಸ್ಕೂಟರ್ ನಲ್ಲಿ ತೆರಳುವ ವೇಳೆ ಹೆಲ್ಮೆಟ್ ಹಾಕಿಲ್ಲ ಅಂತಾ ದಂಡ ವಿಧಿಸುವುದನ್ನು ಕೂಡ ನಾವು ಕೇಳಿರುತ್ತೇವೆ. ಎಂದಾದರೂ ಸ್ಕೂಟರ್ ನಲ್ಲಿ ತೆರಳುವ ವೇಳೆ ಸೀಟ್ ಬೆಲ್ಟ್ ಹಾಕಿಲ್ಲ ಎಂದು ಫೈನ್ ಹಾಕುವುದನ್ನು ಕೇಳಿದ್ದೀರಾ? ಇದೀಗ ಬಿಹಾರದಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಸ್ಕೂಟರ್ ನಲ್ಲಿ ತೆರಳುತ್ತಿರುವ ವೇಳೆ ಸೀಟ್ ಬೆಲ್ಟ್ ಧರಿಸಿಲ್ಲ ಎಂದು ಪೊಲೀಸರು ಫೈನ್ ಹಾಕಿದ್ದಾರೆ.

ಇದನ್ನೂ ಓದಿ: ನಟ ಚಿಯಾನ್ ವಿಕ್ರಮ್ ಪಕ್ಕೆಲುಬಿಗೆ ಏಟು – ‘ತಂಗಲಾನ್’ ಚಿತ್ರೀಕರಣ ಸ್ಥಗಿತ..!

ಬಿಹಾರದ ಸಮತಿಪುರದ ಕೃಷ್ಣಕುಮಾರ್ ಝಾ ಎಂಬುವವರು ಸ್ಕೂಟರ್ ನಲ್ಲಿ ಬನಾರಸ್‌ಗೆ ಹೋಗುತ್ತಿದ್ದರು. ಈ ವೇಳೆ ಅವರು ಸೀಟ್ ಬೆಲ್ಟ್ ಧರಿಸಿಲ್ಲ ಎಂದು 1,000 ರೂಪಾಯಿ ದಂಡ ವಿಧಿಸಲಾಗಿದೆ. ಅಷ್ಟೇ ಅಲ್ಲದೇ ಈ ಹಣವನ್ನು ಈಗಾಗಲೇ ಪಾವತಿಸಲಾಗಿದೆ ಎನ್ನುವುದರ ಕುರಿತು ಚಲನ್ ಬಂದಿದೆ. ಇದನ್ನು ನೋಡಿದ ಕೃಷ್ಣಕುಮಾರ್ ಒಮ್ಮೆಲೇ ಶಾಕ್ ಆಗಿದ್ದಾರೆ. ಬೈಕ್‍ನಲ್ಲಿ ಹೋಗಿರುವುದಕ್ಕೆ ಸೀಟ್ ಬೇಲ್ಟ್ ಯಾಕೆ ಧರಿಸಬೇಕು ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೃಷ್ಣಕುಮಾರ್ ಪೊಲೀಸರನ್ನು ಸಂಪರ್ಕಿಸಿ, ವಿಚಾರಿಸಿದ್ದಾರೆ. ತಾಂತ್ರಿಕ ದೋಷದಿಂದಾಗಿ ಕೆಲವೊಮ್ಮೆ ಈ ರೀತಿಯಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಕೃಷ್ಣಕುಮಾರ್ ಝಾ ಸ್ವೀಕರಿಸಿದ ಚಲನ್ ಅನ್ನು ಮ್ಯಾನುವಲ್‌ನಿಂದ ನೀಡಲಾಗಿದೆ. ತಾಂತ್ರಿಕದೋಷದಿಂದ ಚಲನ್ ಬಂದಿದೆ. ಈ ಸಮಸ್ಯೆಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಬಿಹಾರ ಟ್ರಾಫಿಕ್ ಪೊಲೀಸ್ ಅಧಿಕಾರಿ ಬಲ್ಬೀರ್ ದಾಸ್ ತಿಳಿಸಿದ್ದಾರೆ.

suddiyaana