RCB ವೇಗಿ ಯಶ್ ದಯಾಳ್ ವಿರುದ್ಧ FIR – IPL ಹೀರೋ ವೃತ್ತಿಜೀವನಕ್ಕೆ ಕಂಟಕ?

ಆರ್‌ಸಿಬಿ ತಂಡದ ಪ್ರಮುಖ ಬೌಲರ್ ಆಗಿದ್ದ ಯಶ್ ದಯಾಳ್ ತನ್ನ ವೃತ್ತಿಜೀವನಕ್ಕೆ ತಾವಾಗಿಯೇ ಆಪತ್ತು ತಂದುಕೊಂಡಿದ್ದಾರೆ. ಯಶ್ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಲಾಗಿದೆ. ಗಾಜಿಯಾಬಾದ್‌ನ ಯುವತಿಯೊಬ್ಬಳು ದೂರು ದಾಖಲಿಸಿದ್ದು, ಇದೀಗ ಯಶ್ ದಯಾಳ್ ವಿರುದ್ಧ FIR ದಾಖಲಾಗಿದೆ.
ಇದನ್ನೂ ಓದಿ: RCBಯಿಂದ ಯಶ್ ದಯಾಳ್ ಬ್ಯಾನ್? – ಲವ್.. ಸೆ*ಕ್ಸ್.. ಯುವತಿಗೆ ದೋಖಾ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಯಶ್ ದಯಾಳ್ ಈ ಬಾರಿ IPL ಹೀರೋ ಆಗಿ ಹೊರಹೊಮ್ಮಿದ್ದರು. RCB ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ತಂಡದ ವೇಗದ ಬೌಲರ್ ಯಶ್ ದಯಾಳ್ ಇದೀಗ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಗುರಿಯಾಗಿದ್ದಾರೆ. ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ ಯುವತಿಯೊಬ್ಬಳು, ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದು, ಇದೀಗ ಪೊಲೀಸರು ಪ್ರಕರಣವನ್ನು ಸಹ ದಾಖಲಿಸಿದ್ದಾರೆ. ಯುವತಿಯ ಆರೋಪಗಳು ನಿಜವೆಂದು ಸಾಭೀತಾದರೆ ಯಶ್ ದಯಾಳ್ ಜೈಲು ಪಾಲಾಗಲಿದ್ದು, ಇದರಿಂದ ಅವರ ವೃತ್ತಿಜೀವನಕ್ಕೆ ಮುಳುವಾಗುವ ಸಾಧ್ಯತೆಗಳಿವೆ.
ಮದುವೆಯ ಆಮಿಷವೊಡ್ಡಿ ಯಶ್ ದಯಾಳ್ ಆರ್ಥಿಕ, ಮಾನಸಿಕ ಮತ್ತು ದೈಹಿಕ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸುದೀರ್ಘ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಳು. ಇದರಲ್ಲಿ ಯಶ್ ದಯಾಳ್ ಜೊತೆಗಿರುವ ಫೋಟೋ ಶೇರ್ ಮಾಡಿದ್ದಳು. ಅಲ್ಲದೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ದೂರಿನಲ್ಲಿ ಯಶ್ ದಯಾಳ್ ಬಹಳ ವರ್ಷಗಳಿಂದ ನನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ಉಲ್ಲೇಖಸಿದ್ದಳು. ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಯಶ್ ದಯಾಳ್ ವಿರುದ್ಧ ಹಲವಾರು ಗಂಭೀರ ಆರೋಪಗಳನ್ನು ಮಾಡಿದ್ದಳು. ಕಳೆದ 5 ವರ್ಷಗಳಿಂದ ಯಶ್ ದಯಾಳ್ ಜೊತೆ ಸಂಬಂಧ ಹೊಂದಿದ್ದಾಗಿ ಆಕೆ ತನ್ನ ದೂರಿನಲ್ಲಿ ತಿಳಿಸಿದ್ದಳು. ಅಲ್ಲದೆ ನನ್ನನ್ನು ಮದುವೆಯಾಗುವಂತೆ ಕೇಳಿಕೊಂಡಾಗ ದಯಾಳ್, ನನಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದ ಎಂಬುದನ್ನು ದೂರಿನಲ್ಲಿ ಉಲ್ಲೇಖಿಸಿದ್ದಳು. ಹುಡುಗಿ ಬಗ್ಗೆ ನಮಗೇನು ತಿಳಿದಿಲ್ಲ ಇದು ಮಾತ್ರವಲ್ಲದೆ, ಯಶ್ ದಯಾಳ್ ತನ್ನ ಜೊತೆಗೆ ಇನ್ನೂ ಅನೇಕ ಹುಡುಗಿಯರೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ದೂರಿದ್ದ ಯುವತಿ, ಇಬ್ಬರ ವಾಟ್ಸಾಪ್ ಚಾಟ್ನ ಸ್ಕ್ರೀನ್‌ಶಾಟ್‌ಗಳು, ವಿಡಿಯೋ ಕರೆಗಳು ಮತ್ತು ಫೋಟೋಗಳ ಪುರಾವೆಗಳನ್ನು ಪೊಲೀಸರಿಗೆ ನೀಡಿದ್ದಳು. ಇದೀಗ ಪೊಲೀಸರು ಈ ವಿಷಯದಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆಗೆ ಮುಂದಾಗಿದ್ದಾರೆ. ಈ ಬಗ್ಗೆ ಯಶ್ ದಯಾಳ್ ಬಹಿರಂಗವಾಗಿ ಯಾವುದೇ ಸ್ಪಷ್ಟನೇ ನೀಡದಿದ್ದರೂ, ದಯಾಳ್ ಅವರ ತಂದೆ ಮಾತ್ರ ಈ ಹುಡುಗಿ ಬಗ್ಗೆ ನಮಗೇನು ತಿಳಿದಿಲ್ಲ. ಈ ಹುಡುಗಿ ಈ ಆರೋಪಗಳನ್ನು ಏಕೆ ಮಾಡಿದ್ದಾಳೆಂದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ನೋಡಿರಿ

