ವಿವಾದಾತ್ಮಕ ಹೇಳಿಕೆ ನೀಡಿದ್ಧ ಅರುಣ್‌ ಕುಮಾರ್‌ ಪುತ್ತಿಲ ವಿರುದ್ಧ ಎಫ್‌ಐಆರ್‌ ದಾಖಲು!

ವಿವಾದಾತ್ಮಕ ಹೇಳಿಕೆ ನೀಡಿದ್ಧ ಅರುಣ್‌ ಕುಮಾರ್‌ ಪುತ್ತಿಲ ವಿರುದ್ಧ ಎಫ್‌ಐಆರ್‌ ದಾಖಲು!

ಹಿಂದೂಪರ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ್ಲ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡದ ಶಾಂತಿನಗರದಲ್ಲಿ ನಡೆದ ಕಲ್ಲು ತೂರಾಟ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪುತ್ತಿಲ ವಿರುದ್ಧ ಸುಮಟೋ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಲಭೆ ಹಿನ್ನೆಲೆ ಸೆಕ್ಷನ್‌ 144 ನಿಷೇಧಾಜ್ಜೆ ಜಾರಿಗೊಳಿಸಿದ್ದರೂ, ಅರುಣ್‌ ಕುಮಾರ್‌ ಪುತ್ತಿಲ ಸಂತ್ರಸ್ಥರ ಮನೆಗೆ ಭೇಟಿ ನೀಡಿದ್ದರು. ಬಳಿಕ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕೋಮು ಸೌಹಾರ್ದತೆ ಕದಡಲು ಪ್ರೇರಣೆ ಮತ್ತು ಕೋಮುಗಳ ನಡುವೆ ದ್ವೇಷ ಉತ್ತೇಜಿಸುವ ಭಾಷಣ ಮಾಡಿದ ಕಾರಣಕ್ಕಾಗಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಕಡಿಮೆ ಅಂಕ ಕೊಟ್ಟಿದ್ದಕ್ಕೆ ಹೀಗಾ ಮಾಡೋದು! – ಶಿಕ್ಷಕಿಯ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!

ಸಂತ್ರಸ್ತರ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅರುಣ್‌ ಕುಮಾರ್‌ ಪುತ್ತಿಲ, ಹಿಂದೂಗಳು ಮನೆಯಲ್ಲಿ ತಲ್ವಾರ್ ಒಟ್ಟುಕೊಳ್ಳಬೇಕು, ಆಯುಧ ಪೂಜೆ ದಿನ ಪೂಜೆ ಮಾಡಬೇಕು. ಮತಾಂಧರಿಗೆ ಉತ್ತರ ನೀಡುವ ಸಂದರ್ಭ ಬರಬಹುದು. ಅನೇಕ ರೀತಿಯ ದಾಳಿ, ನೋವು ಅಪಮಾನದ ನಡುವೆ ಹಿಂದೂ ಸಮಾಜದ ರಕ್ಷಣೆ ಮಾಡಬೇಕಿದೆ. ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ದವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕ್ರೂ ಡ್ರೈವರ್, ಸ್ಯ್ಪಾನರ್ ಕೈ ಬಿಡಿ, ತಲ್ವಾರ್‌ಗಳಿಗೆ ಪೂಜೆ ಮಾಡಿ ಎಂದು ಕರೆ ನೀಡಿದ್ದರು.

ಅಲ್ಲದೇ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಮತಾಂಧ ಮುಸ್ಲಿಂ ಸಮುದಾಯದಿಂದ ಘಟನೆ ಆಗಿದೆ. ಮುಸ್ಲಿಂ ತುಷ್ಟೀಕರಣ, ಮತ ಓಲೈಸಲು ರಾಜ್ಯ ಸರ್ಕಾರ ಮತಾಂಧ ಶಕ್ತಿಗೆ ಕುಮ್ಮಕ್ಕು ಕೊಡ್ತಿದೆ. ಇದು ಪೂರ್ವ ನಿಯೋಜಿತ ಕೃತ್ಯ. ಅನೇಕ ರೀತಿಯ ದಾಳಿ, ನೋವು ಅಪಮಾನದ ನಡುವೆ ಹಿಂದು ಸಮಾಜ ರಕ್ಷಣೆ ಮಾಡಬೇಕಿದೆ. ನಮ್ಮಲ್ಲು ತಲ್ವಾರ್, ಶಸ್ತ್ರಾಸ್ತ್ರ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಪೊಲೀಸರು ಐಪಿಸಿ ಸೆಕ್ಷನ್ 153 A ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Shwetha M